;

ಹಿರೇಕೆರೆಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಶ್ರೀಮತಿ ತಿಪ್ಪಮ್ಮ ಲಕ್ಷ್ಮಣ್ ಅವಿರೋಧವಾಗಿ ಆಯ್ಕೆ.!!!

ಹಿರೇಕೆರೆಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಶ್ರೀಮತಿ ತಿಪ್ಪಮ್ಮ ಲಕ್ಷ್ಮಣ್ ಅವಿರೋಧವಾಗಿ ಆಯ್ಕೆ.!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲ್ಲೂಕಿನ ಹಿರೇಕೆರೆಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ತಳವಾರಹಳ್ಳಿ ಗ್ರಾಮದ ಶ್ರೀಮತಿ ತಿಪ್ಪಮ್ಮ ಲಕ್ಷ್ಮಣ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬುಧವಾರದಂದು ನಡೆದ ಗ್ರಾಮ ಪಂಚಾಯಿತಿ ಅಧ್ಯಕ್ಷ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಶ್ರೀಮತಿ ತಿಪ್ಪಮ್ಮ ಲಕ್ಷ್ಮಣ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾರ್ವತ್ರಿಕ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಸಹ ಅವಿರೋಧವಾಗಿ ಆಯ್ಕೆಯಾಗಿದ್ದ ಶ್ರೀಮತಿ ತಿಪ್ಪಮ್ಮರವರು ಇಂದು ನಡೆದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಚುನಾವಣೆಯಲ್ಲಿ ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ಸರ್ವಾನುಮತದಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಒಟ್ಟು ಹತ್ತು ಸದ್ಯಸರ ಬಲ ಹೊಂದಿರುವ ಗ್ರಾಮ ಪಂಚಾಯಿತಿಯಲ್ಲಿ ಶ್ರೀಮತಿ ಪಾಪಕ್ಕರವರಿಂದ ಅಧ್ಯಕ್ಷ ಸ್ಥಾನ ತೆರವುಗೊಂಡಿತ್ತು..ತೆರವಾದ ಸ್ಥಾನಕ್ಕೆಇಂದೂ ನಡೆದ ಚುನಾವಣೆಯಲ್ಲಿ ಶ್ರೀಮತಿ ತಿಪ್ಪಮ್ಮ ಲಕ್ಷಣ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಯಾದ ತಹಸಿಲ್ದಾರ್ ಸುರೇಶ್ ಕುಮಾರ್ ರವರು ಘೋಷಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಹನುಮಂತ ಸದ್ಯಸ್ಯರಾದ ವೀರಣ್ಣಗೌಡ, ಮೂರ್ತಿ, ಶಿವಮ್ಮ, ತಿಪ್ಪಕ್ಕ, ಲಕ್ಷ್ಮಿ, ಮಲಿಯಮ್ಮ, ಮಹಾಂತೇಶ ಸೇರಿದಂತೆ ಬಿಜೆಪಿ ಮಂಡಲದ ಅಧ್ಯಕ್ಷರಾದ ಡಾ. ಮಂಜುನಾಥ್ ಮುಖಂಡರಾದ ಪರಮೇಶ್ವರಪ್ಪ ಹಾಗೂ ಗ್ರಾಮದ ಮುಖಂಡರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು…

ವರದಿ.ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;