ದಲಿತ ಸಂಘಟನೆಗಳ ಹೋರಾಟಕ್ಕೆ ಬೆಂಬಲ – ಬಸನಗೌಡ ಬಾದರ್ಲಿ
ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆಅಗೌರವ ತೋರಿದ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಮಾಜಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಬಸನಗೌಡ ಬಾದರ್ಲಿ ಅವರು ಬೆಂಬಲ ವ್ಯಕ್ತಪಡಿಸಿದರು.
ರಾಷ್ಟ್ರದ ಮತ್ತು ದೀನ ದಲಿತರ ನ್ಯಾಯಕ್ಕಾಗಿ ತಮ್ಮ ಸೇವೆಯನ್ನೇ ಮುಡುಪಾಗಿಟ್ಟು ಸಮಗ್ರ ರಾಷ್ಟ್ರದ ಕಾನೂನು ಮತ್ತು ಸಂವಿಧಾನ ರಚಿಸುವಲ್ಲಿ ಹಗಲಿರುಳು ಶ್ರಮಿಸಿದಂತಹ ಒಬ್ಬ ಶ್ರೇಷ್ಠ ಮಹಾಮಾನವತಾವಾದಿಯ ಅನನ್ಯ ಸೇವೆಗೆ ಅಗೌರವ ತೋರಿದ್ದಾರೆ. ಸುಮಾರು ಮೂರು ವರ್ಷಗಳ ಕಾಲ ದಿನಾಲು ಹದಿನೆಂಟು ಗಂಟೆ ಸಮಯವನ್ನು ವ್ಯಯಿಸಿ ಇಡೀ ವಿಶ್ವಕ್ಕೆ ಮಾದರಿಯಾಗಿರುವ ಸಂವಿಧಾನವನ್ನು ರೂಪಿಸಿರುವ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ವಿಶ್ವಮಾನವ ಚಿತ್ರ ನಮ್ಮೆಲ್ಲರಿಗೂ ಮಾರ್ಗದರ್ಶನ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾಕ್ಟರ್. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ತೆಗೆದರೆ ಧ್ವಜಾರೋಹಣ ಮಾಡುವುದಾಗಿ ಹೇಳಿ ಜಿಲ್ಲಾ ನ್ಯಾಯಾಧೀಶರು ಉದ್ಧಟತನ ಪ್ರದರ್ಶನ ಮಾಡಿರುತ್ತಾರೆ ಇದನ್ನು ತೀವ್ರವಾಗಿ ಖಂಡಿಸುತ್ತೇನೆ.ಆದರೆ ಇಡೀ ವಿಶ್ವವೇ ಗೌರವಿಸುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಗೌರವ ತೋರಿದ ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಿ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ ಎಂದರು. ಹಾಗೂ ಸೋಮವಾರ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಕರೆಕೊಟ್ಟಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು…

ವರದಿ. ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
