ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತರಾಮನ್ ಅವರು ಇಂದು ಬಜೆಟ್ ಮಂಡನೆ ಮಾಡಿದ್ದಾರೆ.,,,,,,,,,,,₹₹₹?
2 ವರ್ಷಗಳಿಂದ ಕರೋನಾದಿಂದ ಲಕ್ಷಾಂತರ ಜನ ಸತ್ತಿದ್ದು, ಕೋಟ್ಯಂತರ ಜನ ತೊಂದರೆ ಅನುಭವಿಸಿದ್ದಾರೆ. ಈ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಕೋವಿಡ್ ಸಂತ್ರಸ್ತರು ಹಾಗೂ ಸತ್ತವರಿಗೆ ಪರಿಹಾರ ನೀಡಲಿದೆ ಎಂಬ ನಿರೀಕ್ಷೆ ಮಾಡಿದ್ದೆವು. ಅವೆಲ್ಲವೂ ಸಂಪೂರ್ಣವಾಗಿ ಹುಸಿಯಾಗಿದೆ.
ಹೆಚ್ಚು ಓದಿದ ಸ್ಟೋರಿಗಳು
ಇಕಾನಾಮಿಕ್ ಸರ್ವೆಯ ಅಂಕಿ-ಅಂಶ, ಚಾರ್ಟುಗಳಲ್ಲಿ ತೌಡು ಕುಟ್ಟಿದ ಸರ್ಕಾರ!
ಸಮಾಜವಾದಿ ಪಕ್ಷದ ಕೆಂಪು ಟೋಪಿಗಳು ಮುಜಾಫರ್ನಗರ ಗಲಭೆ ಸಂತ್ರಸ್ತರ ರಕ್ತದಲ್ಲಿ ಮೂಡಿವೆ : ಯೋಗಿ ಆದಿತ್ಯನಾಥ್
2022ರ ಕೇಂದ್ರ ಬಜೆಟ್ ರೂಪಿಸಿದ ಐವರು ಪ್ರಮುಖ ಅಧಿಕಾರಿಗಳ ಬಗ್ಗೆ ನಿಮಗೆಷ್ಟು ಗೊತ್ತು? : ಇಲ್ಲಿದೆ ಸಂಪೂರ್ಣ ವರದಿ!
ಇದು ಜನಸ್ನೇಹಿ ಬಜೆಟ್ ಅಲ್ಲವೇ ಅಲ್ಲ. ಬಡವರು ಹಾಗೂ ಮಧ್ಯಮ ವರ್ಗದವರ ಪರವಾಗಿ ಸರ್ಕಾರ ಇಲ್ಲ ಎಂಬುದಕ್ಕೆ ಈ ಬಜೆಟ್ ಸಾಕ್ಷಿ. ಆದಾಯ ತೆರಿಗೆ ಯಥಾಸ್ಥಿತಿ ಮುಂದುವರಿದಿದೆ. ಬಿಜೆಪಿಯ ಈ ಹಿಂದಿನ ಬಜೆಟ್ ಗಳ ರೀತಿಯಲ್ಲೇ ಈ ಬಜೆಟ್ ನಲ್ಲೂ ಅನುಕೂಲಸ್ಥರು, ಶ್ರೀಮಂತರಿಗೆ ತೆರಿಗೆ ಕಡಿಮೆ ಮಾಡಲಾಗಿದೆ. ಈ ಸರ್ಕಾರ ಬಡವರು ಹಾಗೂ ಮಧ್ಯಮವರ್ಗದವರಿಗಿಂತ ಶ್ರೀಮಂತರ ಪರವಾಗಿದೆ ಎಂಬುದು ಮತ್ತೊಮ್ಮೆ ಸಾಕ್ಷಿಯಾಗಿದೆ ಎಂದಿದ್ದಾರೆ.
25 ದೊಡ್ಡ ಉದ್ಯಮಿಗಳ 8 ಲಕ್ಷ ಕೋಟಿ ಮೊತ್ತದ ಎನ್ ಪಿಎ (ಕೆಟ್ಟ ಸಾಲ) ಮನ್ನಾ ಮಾಡಿದ ಸರ್ಕಾರ ಇದು. ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದ ಕೇಂದ್ರ ಸರ್ಕಾರ, ರೈತರು ಹಾಗೂ ಕಾರ್ಮಿಕರಿಗೆ ಯಾವುದೇ ಹೊಸ ಕಾರ್ಯಕ್ರಮಗಳನ್ನು ನೀಡಲಿಲ್ಲ. ಸ್ವಾತಂತ್ರ್ಯ ಬಂದಾಗಿನಿಂದ ಶ್ರೀಮಂತರ ಮೇಲೆ ತೆರಿಗೆ ಹಾಕಿ ಬಡವರು, ಬಿಪಿಎಲ್ ಕಾರ್ಡುಗಳ ಮೂಲಕ ಬಡವರಿಗೆ ಆಹಾರ ಪದಾರ್ಥದಿಂದ, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳಲ್ಲಿ ಸಬ್ಸಿಡಿ ನೀಡುವ ಪದ್ಧತಿ ಇತ್ತು. ಆದರೆ ಇಂದು ಬಿಜೆಪಿ ಸರ್ಕಾರ ಶ್ರೀಮಂತರಿಗೆ ಅನುಕೂಲ ಮಾಡಿಕೊಟ್ಟು, ಬಡವರು ಹಾಗೂ ಮಧ್ಯಮವರ್ಗದವರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಬಡವರು ಮತ್ತಷ್ಟು ಬಡವರಾಗಿ, ಶ್ರೀಮಂತರು ಮತ್ತಷ್ಟು ಶ್ರೀಮಂತರಾಗುವಂತೆ ಮಾಡುವುದೇ ಈ ಬಜೆಟ್ ತಿರುಳು ಎಂದು ಕಿಡಿಕಾರಿದ್ದಾರೆ.
ನರೇಂದ್ರ ಮೋದಿ ಅವರು 2014ರಲ್ಲಿ ಅಧಿಕಾರಕ್ಕೆ ಬರುವ ಮುನ್ನ ಅವರ ಪ್ರಣಾಳಿಕೆಯನ್ನು ಒದಿದ್ದರೋ ಇಲ್ಲವೋ, ಆದರೆ ಅವರ ಭರವಸೆಗಳನ್ನು ಮರೆತಿದ್ದಾರೆ. ಆಗ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದಿದ್ದರು. ಮುಂದಿನ ಮೇ ತಿಂಗಳಿಗೆ ಅವರು ಅಧಿಕಾರಕ್ಕೆ ಬಂದು 8 ವರ್ಷ ಪೂರ್ಣಗೊಳ್ಳುತ್ತದೆ. ಕನಿಷ್ಠ 15-16 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಆದರೆ ದೇಶದಲ್ಲಿ ಕೋಟ್ಯಂತರ ಉದ್ಯೋಗಗಳು ನಷ್ಟವಾಗಿವೆ.
ಮನಮೋಹನ್ ಸಿಂಗ್ ಅವರ 10 ವರ್ಷಗಳ ಆಡಳಿತ ಕಾಲದಲ್ಲಿ 24 ಕೋಟಿ ಜನ ಬಡತನ ರೇಖೆಗಿಂತ ಮೇಲೆ ಬಂದಿದ್ದರು. ಇವರ ಆಡಳಿತ ಅವಧಿಯಲ್ಲಿ 22 ಕೋಟಿ ಜನ ಬಡತನ ರೇಖೆಗಿಂತ ಕೆಳಕ್ಕೆ ಕುಸಿದಿದ್ದಾರೆ. ಇದೇ ಮೋದಿ ಅವರ ಸರ್ಕಾರದ ಸಾಧನೆ.
ನದಿ ಜೋಡಣೆ ಮಾಡುತ್ತೇವೆ ಎಂದರೆ ಎಲ್ಲ ಪಕ್ಷಗಳು ಸ್ವಾಗತ ಮಾಡುತ್ತೇವೆ. ಎಲ್ಲ ರಾಜ್ಯಗಳ ಒಪ್ಪಿಗೆ ಅಗತ್ಯವಿದ್ದು, ಹೆಚ್ಚುವರಿ ನೀರು ಸಿಗುವಾಗ ಕುಡಿಯುವ ನೀರಿನ ಕೊರತೆ ನೀಗಿಸಲು ನೆರವಾಗುತ್ತದೆ. ನಮ್ಮ ದೇಶದಲ್ಲಿ ರಸ್ತೆಗಳ ಜೋಡಣೆಗೂ ಮುನ್ನ ನದಿಗಳ ಜೋಡಣೆ ಮಾಡಬೇಕು ಎಂಬ ಉದ್ದೇಶವಿತ್ತು. ಆದರೆ ವಾಜಪೇಯಿ ಅವರು ಹಾಗೂ ನಂತರದ ಸರ್ಕಾರ ರಸ್ತೆಗಳಿಗೆ ಆದ್ಯತೆ ನೀಡಿದ್ದವು. ಹೀಗಾಗಿ ಈ ನದಿ ಜೋಡಣೆ ನೆನೆಗುದಿಗೆ ಬಿದ್ದಿತ್ತು. ಈಗ ಅದನ್ನು ಕೈಗೆತ್ತಿಕೊಂಡರೆ ಸ್ವಾಗತಿಸುತ್ತೇವೆ.
ಈ ಬಜೆಟ್ ನಲ್ಲಿ ಒನ್ ನೇಷನ್ ಎಂಬುದ್ದೆಲ್ಲ ಇಲ್ಲ. ಇದರಲ್ಲಿ ಸರ್ವಾಧಿಕಾರಿ ಧೋರಣೆ ಎದ್ದು ಕಾಣುತ್ತಿದೆ. ಕೇಂದ್ರದವರು ರಾಜ್ಯಗಳಿಗೆ ಇದ್ದ ಅಧಿಕಾರವನ್ನು ಒಂದೊಂದಾಗಿ ಕಸಿಯುತ್ತಿದ್ದು, ಎಲ್ಲವೂ ತಮ್ಮ ನಿಯಂತ್ರಣದಲ್ಲೇ ಇರಬೇಕು ಎಂದು ವರ್ತಿಸುತ್ತಿದ್ದಾರೆ. ಐಎಎಸ್ ಅಧಿಕಾರಿಗಳ ವಿಚಾರ, ಜಿಎಸ್ ಟಿ, ಚುನಾವಣಾ ಆಯೋಗ, ಸಿಬಿಐ, ಆರ್ ಬಿಐನಂತಹ ಸ್ವಾಯತ್ತ ಸಂಸ್ಥೆಗಳು ಹಲ್ಲು ಕಿತ್ತ ಹಾವಿನಂತಾಗಿವ ಅವರು, ಸಾಮಾನ್ಯನ ಬದುಕಿನ ಬಗ್ಗೆ ಬಜೆಟ್ ಯೋಚನೆಯನ್ನೇ ಮಾಡಿಲ್ಲ. ಕೋವಿಡ್, ಬೆಲೆ ಏರಿಕೆಯಿಂದ ಬಸವಳಿದ ಬಡಜನರ ಬಗ್ಗೆ ಕನಿಕರ ತೋರಿಲ್ಲ.ಕೋವಿಡ್ ಸಂಕಷ್ಟದ ನಂತರ ದೇಶದಲ್ಲಿ ಬಡತನಕ್ಕೆ ಹೆಚ್ಚು ಜನರು ದೂಡಲ್ಪಡುತ್ತಿದ್ದರೆ, ಸಿರಿವಂತರು ಮತ್ತಷ್ಟು ಸಿರಿವಂತರಾಗುತ್ತಿದ್ದಾರೆ. ಈ ಬಗ್ಗೆ ಬಜೆಟ್ ನಲ್ಲಿ ಸ್ಪಷ್ಟ ಪರಿಹಾರ ಇಲ್ಲ. ಸೋಂಕಿನ ಮಾರಿಗೆ ಸಿಲುಕಿ ಭರವಸೆ ಕಳೆದುಕೊಂಡಿರುವ ರೈತಾಪಿ, ಕಾರ್ಮಿಕರಿಗೆ ಧೈರ್ಯ ತುಂಬುವ ಅಥವಾ ಅವರನ್ನು ಆರ್ಥಿಕವಾಗಿ ಮೇಲೆತ್ತುವ ಅಂಶಗಳು ಈ ಬಜೆಟ್ ನಲ್ಲಿ ಇರಲೇಬೇಕಾಗಿತ್ತು ಎಂದು ಹೇಳಿದರು.
ಬಜೆಟ್ ಬಗ್ಗೆ ದೊಡ್ಡಮಟ್ಟಿಗೆ ಹೇಳುವಂತಹದ್ದು ಏನೂ ಇಲ್ಲ. ಕೆಲವೊಮ್ಮೆ ಹಸಿದವರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಳ್ಳಿ ಎಂದು ಹೇಳುತ್ತಾರೆ. ಅದೇ ರೀತಿ ತಣ್ಣೀರು ಬಟ್ಟೆ ಹಾಕಿಕೋ ಎಂದು ಹೇಳಿದ್ದಾರೆ ಹಣಕಾಸು ಸಚಿವರು. ಬಜೆಟ್ ಬಗ್ಗೆ ಇನ್ನೂ ಸಂಪೂರ್ಣವಾಗಿ ಗಮನಿಸಿಲ್ಲ. ನದಿ ಯೋಜನೆ ಬಗ್ಗೆ ಮೂರು ವರ್ಷದಿಂದ ಹೇಳುತ್ತಿದ್ದಾರೆ. ಕಾವೇರಿ – ಪೆನ್ನಾರ್, ಕೃಷ್ಣ-ಗೋದಾವರಿ ನದಿಗಳ ಜೋಡಣೆ ಬಗ್ಗೆ ಹೇಳಿದ್ದಾರೆ. ಅದು ಕಾರ್ಯರೂಪಕ್ಕೆ ಬರಬೇಕಲ್ಲ. ನದಿ ಜೋಡಣೆ ವಿಚಾರ ಬರಿ ಚರ್ಚೆಯಲ್ಲಿ. ಇದೆ ಕಾರ್ಯರೂಪಕ್ಕೆ ಬರಬೇಕಿದೆ. ಹೆಚ್ಚಿನ ತೆರಿಗೆ ವಿಧಿಸಿಲ್ಲ ಅನ್ನುವುದು ಬಿಟ್ಟರೇ ಬೇರೆ ಏನೂ ಇಲ್ಲ. ಯಾವುದೇ ಹೊಸ ರೀತಿಯ ಅಭಿವೃದ್ದಿ ಕಾರ್ಯಕ್ರಮವಿಲ್ಲ. ಈ ವರ್ಷವನ್ನು ಕಳೆಯುವ ಬಜೆಟ್ ಅಷ್ಟೇ ಇದು ಎಂದು ಅವರು ಟೀಕಿಸಿದರು.
ಈ ವರ್ಷದ ಕೇಂದ್ರ ಬಜೆಟ್ ನಲ್ಲಿ ಬಡ ಬಿಸಿಊಟ ಕಾರ್ಯಕರ್ತರಿಗೆ.ಅಂಗನವಾಡಿ ಕಾರ್ಯಕರ್ತರಿಗೆ. ಆಶಾ ಕಾರ್ಯಕರ್ತರಿಗೆ ಗೌರವಧನವನ್ನು ಒಂದು ರೂಪಾಯಿಯನ್ನು ಹೆಚ್ಚಳ ಮಾಡಿಲ್ಲ ನರೇಂದ್ರ ಮೋದಿ ಬಡ ಭಾರತ ಮಹಿಳೆಯರನ್ನು ಜೀತದಾಳಾಗಿ ದುಡಿಸಿಕೊಳ್ಳುತ್ತಿರುವುದು ಖೇದಕರ ವಿಷಯ ಕೇವಲ ಬಂಡವಾಳಶಾಹಿಗಳ ಪರವಾದ ಕೇಂದ್ರದ ಬಜೆಟ್ ಮಂಡಿಸಿರುವುದು ಮುಂದಿನ ಚುನಾವಣೆಗಳಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಮನೆಗೆ ಕಳಿಸಲಾಗುವುದು.
ಕಾಮ್ರೇಡ್ ಗುಡಿಹಳ್ಳಿ ಹಾಲೇಶ್
ಎಐಟಿಯುಸಿ ಕಾರ್ಯದರ್ಶಿ ತಾಲೂಕು ಸಮಿತಿ ಹರಪನಹಳ್ಳಿ…

ವರದಿ.ಪ್ರತಾಪ್, ಸಿ, ಹರಪನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
