;

ವಿವಿಧ ಅಭಿವೃದ್ದಿ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿದ ಶಾಸಕ ವೆಂಕಟರಾವ್ ನಾಡಗೌಡ…!!!

ವಿವಿಧ ಅಭಿವೃದ್ದಿ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿದ ಶಾಸಕ ವೆಂಕಟರಾವ್ ನಾಡಗೌಡ.

ಸಿಂಧನೂರು : ಮಾಜಿ ಸಚಿವರು ಹಾಗೂ ಜನಪ್ರಿಯ ಶಾಸಕರಾದ ಶ್ರೀ ವೆಂಕಟರಾವ್ ನಾಡಗೌಡ ಅವರು ಗುರುವಾರದಂದು ಗ್ರಾಮೀಣ ಮತ್ತು ನಗರದ ವಿವಿಧ ವಾರ್ಡ್ ಗಳಲ್ಲಿ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು

ನಗರದ ಜಿಲ್ಲಾ ಪಂಚಾಯತ್ ಉಪ ವಿಭಾಗ ಕಾರ್ಯಾಲಯ ದಲ್ಲಿ 50.00 ಲಕ್ಷ ರೂ.ಗಳ ವೆಚ್ಚದಲ್ಲಿ ಲ್ಯಾಬ್ ಟೆಸ್ಟಿಂಗ್ ಕಟ್ಟಡ ನಿರ್ಮಾಣ, ವಾ.ನಂ 19 ರಲ್ಲಿ 25.00 ಲಕ್ಷ ರೂ.ಗಳ ವೆಚ್ಚದ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ,
ಅರಗಿನಮರ ಕ್ಯಾಂಪ್ ಗ್ರಾಮದಲ್ಲಿ 30.00 ಲಕ್ಷ ರೂ.ಗಳ ವೆಚ್ಚದ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ,
ಬನ್ನಿಗನೂರು ಗ್ರಾಮದ ಎಸ್ ಸಿ ಕಾಲೋನಿಯಲ್ಲಿ 20.00 ಲಕ್ಷ ರೂಗಳ ವೆಚ್ಚದಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ, ಹೆಡಗಿನಾಳ ಗ್ರಾಮದಲ್ಲಿ 30.00 ಲಕ್ಷ ರೂ.ಗಳ ವೆಚ್ಚದ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ, ಅಲಬನೂರು ಗ್ರಾಮದಲ್ಲಿ 30.00 ಲಕ್ಷ ರೂ.ಗಳ ವೆಚ್ಚದ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ, ಆರ್ ಹೆಚ್ ಕ್ಯಾಂಪ್-3 ರಲ್ಲಿ 25.00 ಲಕ್ಷ ರೂ.ಗಳ ವೆಚ್ಚದ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು

ಅಧಿಕಾರಿಗಳು ಮತ್ತು ಉತ್ತಮ ಗುಣಮಟ್ಟ ಕೆಲಸ ಮಾಡಬೇಕು. ಒಂದು ವೇಳೆ ಕಳಪೆ ಮಟ್ಟದ ಕಾಮಗಾರಿ ನಡೆದರೆ ಅವರ ಬಿಲ್ಲುಗಳನ್ನು ತಡೆಯಿಡಿಯಲಾಗುವುದು. ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಕಲ್ಲೂರು ಗ್ರಾಮದಲ್ಲಿ ಮಾಡುವುದರಿಂದ ಅನೇಕ ಮುಖಂಡರು ವಿರೋಧ ವ್ಯಕ್ತಪಡಿಸಿದ್ದು ನಗರದಲ್ಲಿ ಮಾಡಬೇಕೆನ್ನುವ ಒತ್ತಾಯ ಮಾಡುತ್ತಿದ್ದಾರೆ. ಇನ್ನೂ ಎರಡು ದಿನದಲ್ಲಿ ಸರ್ವ ಪಕ್ಷದ ಮುಖಂಡರನ್ನು , ಅದಿಕಾರಿಗಳನ್ನು ಸಭೆ ಕರೆದು ನಗರದಲ್ಲಿ ಸೂಕ್ತ ಜಾಗವನ್ನು ತೋರಿಸಿದರೆ ಅಲ್ಲಿಯೇ ಮಾಡಲು ಸಿದ್ದರಿದ್ದೇವೆ ಎಂದು ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ನಗರ ಸಭೆ ಸದಸ್ಯರಾದ ಚಂದ್ರುಮೈಲಾರ, ನದಿಮುಲ್ಲಾ , ಅಜಯದಾಸರಿ, ತಾಲೂಕು ಯುವ ಘಟಕದ ಅಧ್ಯಕ್ಷರಾದ ಕೆ. ಹನುಮೇಶ, ಗ್ರಾ.ಪಂ. ಅಧ್ಯಕ್ಷರು ಮತ್ತು ಸದಸ್ಯರು. ಗ್ರಾ. ಪಂ.ಅಭಿವೃದ್ಧಿ ಅಧಿಕಾರಿಗಳು, ಸಂಭಂದಪಟ್ಟ ಇಲಾಖೆಯ ಅಧಿಕಾರಿಗಳು, ಜೆಡಿಎಸ್ ಪಕ್ಷದ ಹಿರಿಯ ಮತ್ತು ಯುವ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮದ ಅಭಿವೃದ್ದಿ ಕಾಮಗಾರಿಗಳ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು…

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;