ಗುಡೇಕೋಟೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನೂತನ ಹೆಚ್ಚುವರಿ ಕೊಠಡಿ ಉದ್ಘಾಟಿಸಿದ ಶಾಸಕ ಎನ್ ವೈ ಗೋಪಾಲಕೃಷ್ಣ.
ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಆಂಗ್ಲಮಾಧ್ಯಮ ತರಗತಿಗೆ ಹೆಚ್ಚುವರಿ 08 ಕೊಠಡಿ ನಿರ್ಮಾಣ, ಶಾಸಕ ಎನ್ ವೈ ಗೋಪಾಲಕೃಷ್ಣ ರವರಿಂದ ಉದ್ಘಾಟನೆ ಮಾಡಿದರು.ಗುಡೇಕೋಟೆ ಹೊಬಳಿ ವ್ಯಾಪ್ತಿಯಲ್ಲಿ ಮಹಾದೇವಪುರ ಗ್ರಾಮದಲ್ಲಿ 02 ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ.ಲಿಂಗನಹಳ್ಳಿ ತಾಂಡಾ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ 02 ಕೊಠಡಿ.ನಂತರ ಗುಡೇಕೋಟೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳ ವಸತಿ ಗೃಹ ಉದ್ಘಾಟಿಸಿ.ಗುಡೇಕೋಟೆ ಕರ್ನಾಟಕ ಪಬ್ಲಿಕ್ ಶಾಲೆ 08 ಕೊಠಡಿ.ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 05 ಕೊಠಡಿ ಮತ್ತು ಬಿಸಿಯೂಟ ಆಡುಗೆ ಕೊಠಡಿ.ಗ್ರಾಮ ಪಂಚಾಯಿತಿ ಹೈಟೇಕ್ ಗ್ರಂಥಾಲಯ ಉದ್ಘಾಟನೆ ಇಂದು ಒಂದೆ ದಿನ ಈ ಎಲ್ಲಾ ಶಾಲಾ ಕೊಠಡಿಗಳನ್ನು ಉದ್ಘಾಟನೆ ನೇರವೇರಿಸಿ ಮಾತನಾಡಿದ ಅವರು ಸರಕಾರ ಶಿಕ್ಷಣಕ್ಕೆ ಹೆಚ್ಚು ಒತ್ತುಕೊಡುತ್ತಿದ್ದು ನಾನೂ ಕೂಡಾ ನನ್ನ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಆದ್ಯತೆಯ ಮೇರೆಗೆ ಕೆಲಸ ಮಾಡುತ್ತಿದ್ದೇವೆ. ಯಾವುದೇ ಮಗುವೂ ಕೂಡಾ ಶಿಕ್ಷಣದಿಂದ ವಂಚಿತವಾಗಬಾರದು ಎನ್ನುವುದು ನನ್ನ ಉದ್ದೇಶ ಆಗಿದ್ದು ಆ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದೇನೆ. ಸರಕಾರಿ ಶಾಲೆಗಳಲ್ಲಿಯ ಶಿಕ್ಷಕರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದ ಅವರು ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಸರಕಾರಿ ಶಾಲೆಗಳು ಸಾಕ್ಷಿಯಾಗಿವೆ ಎಂದೂ ಹೇಳಿದರು.
ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಚಾರ್ಯರಾದ ಗಿರೀಶ್ ಅವರು ಶಿಕ್ಷಣ ಕ್ಷೇತ್ರದಲ್ಲಿ ನಾವು ಪ್ರಗತಿಯನ್ನ ಸಾದಿಸುತ್ತಿದ್ದು ಸರಕಾರಿ ಶಾಲೆಗಳಲ್ಲಿಯೂ ಇಂದು ಗುಣಮಟ್ಟದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಿಕ್ಷಣ ನೀಡುವಲ್ಲಿ ಸರಕಾರದ ಕ್ರಮ ಸ್ವಾಗತಾರ್ಹವಾಗಿದೆ ಎಂದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಯುವರಾಜ್ ನಾಯ್ಕ್ . ಸಿಬ್ಬಂದಿಗಳು. ತಹಶೀಲ್ದಾರ್ ಟಿ.ಜಗದೀಶ್. ಬಿ.ಆರ್.ಸಿ. ಮಾತನಾಡಿದರು.ಎಸ್.ಡಿ.ಎಂ.ಸಿ. ಅಧ್ಯಕ್ಷರು ಸರ್ವ ಸದಸ್ಯರು. ಉಪಸ್ಥಿತರಿದ್ದರು.ಗ್ರಾಮ ಪಂಚಾಯಿತಿ ಅದ್ಯಕ್ಷರು ಸರ್ವ ಸದಸ್ಯರು ಹಾಗೂ ಶಾಲಾ ಶಿಕ್ಷಕರುಗಳು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
