ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಭವ್ಯ ಚಾಲನೆ…!!!

ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಭವ್ಯ ಚಾಲನೆ

 

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ಪಟ್ಟಣದ ವಾಲ್ಮೀಕಿ ಭವನದಲ್ಲಿ ಶನಿವಾರ ಚಾಲನೆ ನೀಡಿದರು.

ಈ ವೇಳೆ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ೧೮೮೫ರಲ್ಲಿ ಬ್ರಿಟೀಷರ ವಿರುದ್ಧ ಹೋರಾಡಲು ಸ್ಥಾಪನೆ ಮಾಡಲಾಯಿತು. ಆರಂಭದಲ್ಲಿ ಶ್ರೀಮಂತರು, ವಿದೇಶಗಳಲ್ಲಿ ಓದಿಕೊಂಡು ಬಂದವರು ಪಕ್ಷದ ಸದಸ್ಯತ್ವ ಪಡೆಯುತ್ತಿದ್ದರು. ಆದರೆ ಇವರು ಯಾರು ಕೂಡ ಬ್ರಿಟೀಷರ ವಿರುದ್ಧ ಹೋರಾಡುವ ಮನೋಭಾವನೆಯನ್ನು ಹೊಂದಿರಲಿಲ್ಲ. 1915ರಲ್ಲಿ ಮಹಾತ್ಮ ಗಾಂಧೀಜಿಯವರು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ವಾಪಸ್ ಆಗಿ ಸ್ವಾತಂತ್ರö್ಯ ಹೋರಾಟಕ್ಕೆ ಧುಮುಕುತ್ತಾರೆ. ಬಾಲಗಂಗಾಧರ ತಿಲಕ್‌ರವರ ಸಲಹೆ ಮೇರೆಗೆ ರೈಲುಗಳ ಮೂಲಕ ಇಡೀ ದೇಶದಾದ್ಯಂತ ಸಂಚರಿಸಿ ಜನರ ಕಷ್ಟ, ನಷ್ಟಗಳನ್ನು ಅರ್ಥ ಮಾಡಿಕೊಳ್ಳುತ್ತಾರೆ. ಬ್ರಿಟೀಷರ ವಿರುದ್ಧ ಹೋರಾಡಲು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಜನರು ಒಗ್ಗಟ್ಟಾಗಬೇಕು ಎಂಬ ನಿರ್ಧಾರಕ್ಕೆ ಬರುತ್ತಾರೆ. ೧೯೨೫ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಶುರುವಾಯಿತು. ಪ್ರತಿಯೊಬ್ಬರು ೨೫ ಪೈಸೆ ನೀಡಿ ೬ ತಿಂಗಳಲ್ಲಿ ಒಂದು ಕೋಟಿ ಜನ ಸದಸ್ಯತ್ವ ಪಡೆದುಕೊಂಡರು. ಈಗ ದೇಶದ ಜನ ಮತ್ತೆ ಸಂಘಟಿತರಾಗುವ ಸಮಯ ಬಂದಿದೆ. ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಲು ಹೆಚ್ಚು ಜನರನ್ನು ಕಾಂಗ್ರೆಸ್ ಪಕ್ಷದ ಸದಸ್ಯರನ್ನಾಗಿ ಮಾಡಬೇಕಿದೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಬಳಿಕ ಪಿಪಿಟಿ ಮೂಲಕ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಮಾಡಿಸುವುದು ಹೇಗೆ ಎಂದು ವಿವರಿಸಿದರು.

 

ಉತ್ತರ ಭಾರತಕ್ಕೆ ಹೋಲಿಸಿದರೆ ದಕ್ಷಿಣ ಭಾರತದಲ್ಲಿ ಶಿಕ್ಷಿತರು ಹೆಚ್ಚು ಜನರಿದ್ದಾರೆ. ಆದರೆ ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಶಾಂತಿ, ಸೌಹಾರ್ದತೆಯಿಂದ ಇರುತ್ತಿದ್ದ ಕರ್ನಾಟಕವನ್ನು ಉತ್ತರಪ್ರದೇಶದಂತೆ ಗೂಂಡಾ ರಾಜ್ಯವನ್ನಾಗಿ ಮಾಡುತ್ತಿದ್ದಾರೆ. ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಆದಮೇಲಂತೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಅವರು ಅನ್ಯಾಯದ ವಿರುದ್ಧ ಮಾತನಾಡುತ್ತಿಲ್ಲ. ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಇರುತ್ತೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ಸಿಎಂ ಸ್ಥಾನಕ್ಕೆ ಇರುವ ಘನತೆಯನ್ನ ಹಾಳುಮಾಡಿದ್ದಾರೆ. ಅವರಿಂದ ನೊಂದ ಜನರಿಗೆ ಯಾವ ರಕ್ಷಣೆ, ನ್ಯಾಯ ಸಿಗುವುದಿಲ್ಲ ಎಂಬುದು ಮನವರಿಕೆಯಾಗಿದೆ. ಬಿಜೆಪಿಯವರು ಮುಸ್ಲಿಮರು, ಕ್ರಿಶ್ಚಿಯನ್ನರ ವಿರುದ್ಧ ಹಿಂದೂಗಳನ್ನು ಎತ್ತಿ ಕಟ್ಟಿ ಅವರನ್ನು ಶತ್ರುಗಳ ಹಾಗೆ ಬಿಂಬಿಸುತ್ತಾರೆ. ಆಮೇಲೆ ಜಾತಿ-ಜಾತಿಗಳ ಮಧ್ಯೆ, ಭಾಷೆ-ಭಾಷೆಗಳ ಮಧ್ಯೆ, ಸಂಸ್ಕೃತಿ, ಆಚಾರ, ವಿಚಾರಗಳ ಮಧ್ಯೆ ವಿಷ ಬೀಜ ಬಿತ್ತಿ ಇಡೀ ದೇಶವನ್ನೇ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವ ಹುನ್ನಾರ ನಡೆಸುತ್ತಿದ್ದಾರೆ. ಇಂದು ಮುಸ್ಲಿಮರ ವಿರುದ್ಧ ಆಗುತ್ತಿರುವ ಅನ್ಯಾಯವನ್ನು ನಾವು ಖಂಡಿಸದಿದ್ದರೆ ಮುಂದೆ ನಮ್ಮ ಮೇಲೆ ಆಗುವ ದೌರ್ಜನ್ಯಗಳನ್ನು ಖಂಡಿಸಲು ಯಾರು ಮುಂದೆ ಬರುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ಇದೇ ವೇಳೆ ಮಾಜಿ ಸಚಿವ ಎಚ್. ಆಂಜನೇಯ, ಮಾಜಿ ಶಾಸಕ ಎ.ವಿ.ಉಮಾಪತಿ, ವಿಧಾನ ಪರಿಷತ್ ಪರಾಜಿತ ಅಭ್ಯರ್ಥಿ ಸೋಮಶೇಖರ್ ಮಾತನಾಡಿದರು. ಈ ವೇಳೆ ಭರಮಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದುರುಗೇಶ್ ಪೂಜಾರ್, ಹೊಳಲ್ಕೆರೆ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ರುದ್ರಣ್ಣ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಜರ್, ಜಿಪಂ ಮಾಜಿ ಸದಸ್ಯರಾದ ಡಿ.ಕೆ. ಶಿವಕುಮಾರ್, ಎಂ.ಜಿ. ಲೋಹಿತ್ ಕುಮಾರ್, ತಾಳಿಕಟ್ಟೆ ಗಂಗಾಧರಪ್ಪ, ರಂಗಸ್ವಾಮಿ, ಯೂತ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಕಾಂಗ್ರೆಸ್ ಮುಖಂಡರಾದ ಎ. ಚಿತ್ತಪ್ಪ ಯಾದವ್, ವೈಶಾಕ್ ಯಾದವ್, ಸೈಯದ್ ಸಜಿಲ್, ಮನ್ಸೂರ್, ಮಲ್ಲಿಕಾರ್ಜುನ್, ಲಿಂಗರಾಜು ಇತರರು ಇದ್ದರು.

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ಪಟ್ಟಣದ ವಾಲ್ಮೀಕಿ ಭವನದಲ್ಲಿ ಶನಿವಾರ ಚಾಲನೆ ನೀಡಿದರು. ಮಾಜಿ ಸಚಿವ ಎಚ್. ಆಂಜನೇಯ, ಮಾಜಿ ಶಾಸಕ ಎ.ವಿ.ಉಮಾಪತಿ, ವಿಧಾನ ಪರಿಷತ್ ಪರಾಜಿತ ಅಭ್ಯರ್ಥಿ ಸೋಮಶೇಖರ್ ಇದ್ದರು…

ವರದಿ. ಸುರೇಶ್, ಹೊಳಲ್ಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend