ಧಾರವಾಡ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ನಾಡೋಜ ಚೆನ್ನವೀರ ಕಣವಿ (93), ಇಂದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಈ ಮೂಲಕ ಕನ್ನಡ ಸಾಹಿತ್ಯ ಲೋಕದ ಹಿರಿಯ ಕೊಂಡಿಯೊಂದು ಕಳಚಿದಂತೆ ಆಗಿದೆ.
ಅನಾರೋಗ್ಯದಿಂದಾಗಿ ಜನವರಿ 14ರಿಂದ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ನಾಡೋಜ ಚೆನ್ನವೀರ ಕಣವಿ ದಾಖಲಾಗಿ, ಪಡೆಯುತ್ತಿದ್ದರು. ನಿನ್ನೆ ಅವರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿಸಲಾಗಿತ್ತು. ಈ ಬಳಿಕ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಇನ್ನಿಲ್ಲವಾಗಿದ್ದಾರೆ.
ಅಂದಹಾಗೇ, ಚೆನ್ನವೀರ ಕಣವಿ ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್‌ಎಂದು ಪ್ರಸಿದ್ಧಿರಾದ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದರು…

ವರದಿ. ಬಸವರಾಜ್, ಎಚ್ ಧಾರವಾಡ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
