ಕಳಚಿತು ಕನ್ನಡ ಸಾಹಿತ್ಯ ಲೋಕದ ಹಿರಿಯ ಕೊಂಡಿ…!!!

ಕಳಚಿತು ಕನ್ನಡ ಸಾಹಿತ್ಯ ಲೋಕದ ಹಿರಿಯ ಕೊಂಡಿ.

ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್‌ ಎಂದು ಪ್ರಸಿದ್ಧರಾಗಿದ್ದ ನಾಡೋಜ ಡಾ. ಚೆನ್ನವೀರ ಕಣವಿ ಅವರ ನಿಧನದ ಸುದ್ಧಿ ಕೇಳಿ ಅಪಾರ ನೋವುಂಟಾಯಿತು.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಭಾರತ ಸರಕಾರದ ಮಾನವ ಸಂಪನ್ಮೂಲ ಇಲಾಖೆಯ ಸಂಸ್ಕೃತಿ ವಿಭಾಗದ ಎಮರಿಟಿಸ್ ಫೆಲೋಷಿಪ್, ಪಂಪ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಕಣವಿ ಅವರ ಸಾಹಿತ್ಯ ಸಾಧನೆಗಾಗಿ ಬಂದಿವೆ.

ಹಾಸನದಲ್ಲಿ ಜರುಗಿದ 65ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಣವಿ ಅವರು ಸಮ್ಮೇಳನಾಧ್ಯಕ್ಷರಾಗಿದ್ದರು.

ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದ ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

ಅಗಲಿದ ಆತ್ಮಕ್ಕೆ ಸದ್ಗತಿ ಸಿಗಲಿ. ಕುಟುಂಬ ಸದಸ್ಯರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ….

ವರದಿ.ಮಂಜುನಾಥ್, ದೊಡ್ಡಮನಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend