ಗಣರಾಜ್ಯೋತ್ಸವದ ವೇಳೆ ಡಾ”ಬಿ. ಆರ್. ಅಂಬೇಡ್ಕರ್ ಫೋಟೋಕೆ ಅವಮಾನಸಿದ, ನ್ಯಾಯದೀಶರ ವಿರುದ್ಧ ರಾಜಧಾನಿಯಲ್ಲಿ ಪ್ರತಿಭಟನೆ…!!!

ಗಣರಾಜ್ಯೋತ್ಸವ ಆಚರಣೆ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆರವು ಮಾಡಿಸಿದ ಆರೋಪಕ್ಕೆ ಗುರಿಯಾಗಿರುವ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡಪಾಟೀಲ ಅವರನ್ನು ವಜಾಗೊಳಿಸಬೇಕೆಂದು ದಲಿತರ ಸಂಘಟನೆಯ ಮುಖಂಡರು , ಪ್ರಗತಿಪರರು , ಚಿಂತಕರು ಒಕ್ಕೊರಲಿನಿಂದ ಆಗ್ರಹಿಸಿ , ಸರಕಾರದ ವಿರುದ್ಧ ರಣಕಹಳೆ ಮೊಳಗಿಸಿದರು . ಶನಿವಾರ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಕರ್ನಾಟಕ ನೇತೃತ್ವದಲ್ಲಿ ಇಲ್ಲಿನ ಸಿಟಿ ರೈಲ್ವೇ ನಿಲ್ದಾಣ ಮುಂಭಾಗ ಜಮಾಯಿಸಿದ ಸಾವಿರಾರು ಹೋರಾಟಗಾರರು , ವಿಧಾನ ಸೌಧ , ಹೈಕೋರ್ಟ್ ಚಲೋ ಘೋಷಣೆಯೊಂದಿಗೆ ಬೃಹತ್ ಕಾಲ್ನಡಿಗೆ ಜಾಥಾ ನಡೆಸಿದರು . ಬಳಿಕ ಫ್ರೀಡಂಪಾರ್ಕ್ ಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಜಮಾವಣೆಗೊಂಡ ಹೋರಾಟಗಾರರು , ಸಂವಿಧಾನ ವಿರೋಧಿ ಮಲ್ಲಿಕಾರ್ಜುನ ಗೌಡ ಪಾಟೀಲ್ ಅವರ ವಿರುದ್ಧ ಈ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು . ಎಲ್ಲ ಕೋರ್ಟ್ ಸಭಾಂಗಣಗಳಲ್ಲಿಯೇ ಅಂಬೇಡ್ಕರ್ ಅವರ ಭಾವಚಿತ್ರ ಕಡ್ಡಾಯಗೊಳಿಸಿ ಆದೇಶ ಹೊರಡಿಸಬೇಕು . ನ್ಯಾಯಾಲಯಗಳಲ್ಲಿ ಮೀಸಲಾತಿ ಕಡ್ಡಾಯಗೊಳಿಸಬೇಕು . ಅದೇ ರೀತಿ , ಹುಮ್ನಾಬಾದ್ ತಹಶೀಲ್ದಾರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸುವಂತೆ ನಿರ್ಣಯಗಳನ್ನು ಒಕ್ಕೊರಲಿನಿಂದ ಅಂಗೀಕರಿಸಿದರು …

ವರದಿ.ಮಹಾಲಿಂಗ ಗಗ್ಗರಿ. ಬೆಳಗಾವಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend