ಮೊಳಕಾಲ್ಮೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ…!!!

ಮೊಳಕಾಲ್ಮೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಇಂದು ಕನ್ನಡ ಭವನದಲ್ಲಿ ಪೂರ್ವ ಭಾವಿ ಸಭೆ ಕರೆಯಲಾಗಿತ್ತು.ಶಮಾರ್ಚ್ 5ರಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದೂ ಕಸಪಾ ಕಾರ್ಯದರ್ಶಿ ರಾಜಶೇಖರ್ ನಾಯಕ ಹೇಳಿದರು. ಈ ವೇಳೆ ಮಾತನಾಡಿದ ಅವರು ಮಾರ್ಚ್ 5ರಂದು ಕಸಾಪ ಪದಾಧಿಕಾರಿಗಳು ಸೇವಾ ಸ್ವೀಕಾರ ಮಾಡಲಿದ್ದು ನಿಕಟಪೂರ್ವ ಅಧ್ಯಕ್ಷರಾಗಿರುವ ಡಿ. ಓ.ಮುರಾರ್ಜಿ ಯವರು ಹಾಲಿ ಅಧ್ಯಕ್ಷರಾಗಿರುವ ಜಿಂಕ ಶ್ರೀನಿವಾಸ್ ಮೂರ್ತಿಯವರಿಗೆ ಜಿಲ್ಲಾ ಕಸಾಪ ಅಧ್ಯಕ್ಷರ ಸಮಕ್ಷಮದಲ್ಲಿ ಕನ್ನಡ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿಗಳದ ವಸಂತಮಾಸ್ಟರ್ ಯುವ ಸಾಹಿತಿ ರಾಜು ಸೂಲೇನಹಳ್ಳಿ ಸೇರಿದಂತೆ ಕಲಾ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಡಯಟ್ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಈ ಸಭೆಯಲ್ಲಿ ತಾಲೂಕು ಅಧ್ಯಕ್ಷರಾದ ಜಿಂಕಾ ಶ್ರೀನಿವಾಸ್ ಮೂರ್ತಿ, ಕಾರ್ಯದರ್ಶಿಗಳಾದ ರಾಜಶೇಖರ ನಾಯಕ, ಬಡಯ್ಯ, ಕೋಶಾಧ್ಯಕ್ಷರಾದ ಶ್ರೀರಾಮುಲು ಹಾಗೂ ಪದಾಧಿಕಾರಿಗಳಾದ ಗೋವಿಂದಪ್ಪ, ಪ್ರಾಚಾರ್ಯರಾದ ಓಬಣ್ಣ, ಕೆಪಿ ಗಂಗಾಧರ ಶ್ರೀಧರ ನಾಯಕ ಸೇರಿದಂತೆ ಇನ್ನಿತರರು ಇದ್ದರು…

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend