ಸಿದ್ದಾಪುರ ಅಂಗನವಾಡಿ ಕೇಂದ್ರದಲ್ಲಿ ನಾಲ್ಕು ದಿನಗಳ ಕಾಲ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ….!!!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು. ಸಿದ್ದಾಪುರ
ಅಂಗನವಾಡಿ ಕೇಂದ್ರದಲ್ಲಿ ನಾಲ್ಕು ದಿನಗಳ ಕಾಲ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ.
ಗುಂಡುಮುಣುಗು ಗ್ರಾಮ ಪಂಚಾಯಿತಿಗೆ ಸೇರಿದ ಸಿದ್ದಾಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಆರು ತಿಂಗಳಿನಿಂದ ಐದು ವರ್ಷದ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆಯಾಯಿತು. ದಿನಾಂಕ 22. 2.2022. ರಿಂದ 2.3.2022 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು ತಾಲೂಕಿನಾದ್ಯಂತ ನಡೆಯುತ್ತಿದ್ದು ಈ ಕಾರ್ಯಕ್ರಮದಲ್ಲಿ ಆರು ತಿಂಗಳಿಂದ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ ಸಾರ್ವಜನಿಕರು ತಮ್ಮ ಗ್ರಾಮಗಳಲ್ಲಿ ಲಭ್ಯವಿರುವ ಪೋಲಿಯೋ ಲಸಿಕೆ ಕೇಂದ್ರಗಳಿಗೆ ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗಿ ಪೋಲಿಯೋ ಹನಿ ಹಾಕಿಸಬೇಕೆಂದು. ಸಿದ್ದಾಪುರ ಗ್ರಾಮದ ಆಶಾ ಕಾರ್ಯಕರ್ತೆ ಶ್ರೀಮತಿ ಗೀತಮ್ಮ ರವರುಸಿದ್ದಾಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಏರ್ಪಡಿಸಿದ್ದ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರಾ ದ ಭಾಗ್ಯಮ್ಮ ಮತ್ತು ಶ್ರೀಮತಿ ನಂದಿನಿ ಯವರು. ಮಕ್ಕಳಿಗೆ ಪಲ್ಸ್ ಪೊಲಿಯೋ ಹನಿ ಹಾಕಿ ಚಾಲನೆ ನೀಡಿದರು. ಗುಂಡುಮುನುಗು ಗ್ರಾಮಪಂಚಾಯಿತಿ ಸಿದ್ದಾಪುರ ಗ್ರಾಮದ ನೀರಗಂಟಿ ನಬೀಸಾಬ್ ರವರು ಸಾರ್ವಜನಿಕರಿಗೆ ಆರು ತಿಂಗಳಿಂದ ಐದು ವರ್ಷದೊಳಗಿನ ಎಲ್ಲಾ ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಪೋಲಿಯೋ ಹನಿ ಹಾಕಿಸಿ ಕೊಂಡು ಬರುವಂತೆ ಸಾರ್ವಜನಿಕರಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿಯರು, ಮಕ್ಕಳು ಇತರರಿದ್ದರು..

ವರದಿ.ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend