ಕೂಡ್ಲಿಗಿ:ಎಸ್ಕೆಆರ್ಡಿಬಿ ಯಿಂದ ಕಿಟ್ ವಿತರಣೆ…!!!

ಕೂಡ್ಲಿಗಿ:ಎಸ್ಕೆಆರ್ಡಿಬಿ ಯಿಂದ ಕಿಟ್ ವಿತರಣೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ರಾಮನಗರದಲ್ಲಿ, ಕ್ಷೇತ್ರದ ಹನುಮಂತಮ್ಮ ಎಂಬುವ ಮಾಷಾಸನ ಫಲಾನುಭವಿಗಳಿಗೆ. ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಕಿಟ್ ವಿತರಣೆ ಮಾಡಿದರಲ್ಲದೆ, ಫಲಾನುಭವಿಗಳ ಕುಟುಂಬದ ಬಗ್ಗೆ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು. ಮಾತೃಶ್ರೀ ಹೇಮಾವತಿ ಅಮ್ಮನವರ ಆಶಯದಂತೆ, ಕಾರ್ಯಕ್ರಮ ನಡೆಯುತ್ತಿದ್ದು ನಿರ್ಗತಿಕರಿಗೆ ಈ ಸೌಲಭ್ಯ ಸಿಗುತ್ತಿದೆ. ಧರ್ಮಸ್ಥಳ ಕ್ಷೇತ್ರದ ಪೂಜ್ಯರಾದ ಮತೋಶ್ರೀ ಅವರ ಹೆಗ್ಗಳಿಕೆ ಎಂದರು. ಕೂಡ್ಲಿಗಿ ತಾಲೂಕಿನಲ್ಲಿ 16 ಕಿಟ್ ಗಳನ್ನು ವಿತರಿಸಲಾಗಿದ್ದು, ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಒಟ್ಟು1331 ವಾತ್ಸಲ್ಯ ಕಿಟ್ ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು. ಜ್ಞಾನ ವಿಕಾಸ ಕಾರ್ಯಕ್ರಮದ ನಿರ್ದೇಶಕರಾದ ವಿಠ್ಠಲ್ ಪೂಜಾರಿ, ಹೊಸಪೇಟೆ ಜಿಲ್ಲಾ ನಿರ್ದೇಶಕರಾದ ಕೆ.ಚಿದಾನಂದ, ಯೋಜನಾಧಿಕಾರಿ ಬಿ. ಮಂಜುನಾಥ, ಹಾಗೂ ಜನಜಾಗೃತಿ ವೇದಿಕೆ ಸದಸ್ಯರಾದ ಕಾವಲಿ ಶಿವಪ್ಪ, ಒಕ್ಕೂಟದ ಅಧ್ಯಕ್ಷೆ ರಾಜೇಶ್ವರಿ,ಜ್ಞಾನವಿಕಾಸ ಸಮನ್ವಯಾಧಿಕಾರಿ ಮಂಜುಳಾ, ಮೇಲ್ವಿಚಾರಕಿ ಜಯಲಕ್ಷ್ಮಿ, ಸ್ಥಳೀಯ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ವಿ.ಜಿ.ವೃಷಭೇಂದ್ರ ಕೂಡ್ಲಿಗಿ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend