ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ.
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ.
ಕಾನಹೊಸಹಳ್ಳಿ ಅಂಗನವಾಡಿ ಕೇಂದ್ರ ದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಯಿತು.
ಆರೋಗ್ಯ ಇಲಾಖೆಯಿಂದ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ರಾಜ್ಯದಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಪೋಷಕರು 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಾದ ಶರಣಪ್ಪನವರು ಕಾನಹೊಸಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಏರ್ಪಡಿಸಿದ್ದ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿಯೊಂದು ಕುಟುಂಬದವರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವ ಮೂಲಕ ಪೋಲಿಯೊ ಮುಕ್ತ ರಾಷ್ಟ್ರವನ್ನಾಗಿ ಸಬೇಕು ಎಂದು ವಿಜಯನಗರ ಜಿಲ್ಲಾ ಬಿಜೆಪಿ.ಮೋರ್ಚ ಕಾರ್ಯದರ್ಶಿ ವೀರೇಶ್ ಕಿಟ್ಟಪ್ಪ ನವರು ಮಾತನಾಡಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಹೊನ್ನೂರು ಸ್ವಾಮಿ ಮಾತನಾಡಿ ಕಾನ ಹೊಸಹಳ್ಳಿ ಗ್ರಾಮದ ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತರು ಮನೆಮನೆಗೆ ತೆರಳಿ ಪೋಲಿಯೊ ಲಸಿಕೆ ಹಾಕುತ್ತಿದ್ದಾರೆ. ಪ್ರತಿಯೊಬ್ಬ ಪೋಷಕರು ತಪ್ಪದೇ ಮಕ್ಕಳಿಗೆ ಲಸಿಕೆಯನ್ನು ಹಾಕಿಸಿರಿ. ಮಕ್ಕಳಿಗೆ ಲಸಿಕೆಯನ್ನು ಹಾಕಿಸುವ ಮೂಲಕ ಭಾರತವನ್ನು ಪೋಲಿಯೊ ಮುಕ್ತ ದೇಶವನ್ನಾಗಿ ಮಾಡೋಣ ಎಂದು ಈ ಸಂದರ್ಭದಲ್ಲಿ ಹೇಳಿದರು ಈ ಕಾರ್ಯಕ್ರಮದಲ್ಲಿ, ಆರೋಗ್ಯ ಇಲಾಖೆಯ ರಾಘವೇಂದ್ರ ರೆಡ್ಡಿ, ಆಶಾ ಕಾರ್ಯಕರ್ತೆಯರಾದ ಕವಿತ. ಶಶಿಕಲಾ,ಅಂಗನವಾಡಿ ಕಾರ್ಯಕರ್ತೆಯರು, ಹಾಗೂ ಗ್ರಾಮದ ಅಜ್ಜಣ್ಣ ರಾಘು ಸೇರಿದಂತೆ ಮಕ್ಕಳುಪೋಷಕರು ಉಪಸ್ಥಿತರಿದ್ದರು…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
