;

ಕುಡಿಯುವ ನೀರು ಸರಬರಾಜು ಯೋಜನೆಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರು ಶಂಕುಸ್ಥಾಪನೆ‌ ನೆರವೇರಿಸಿದರು…!!!

ಶನಿವಾರ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಅಫಜಲಪುರ ಪಟ್ಟಣಕ್ಕೆ ಭೀಮಾ ನದಿ (ಸೊನ್ನಾ ಬ್ಯಾರೇಜ್) ಯಿಂದ ₹ 66.54 ಕೋಟಿ ವೆಚ್ಚದಲ್ಲಿ ಒದಗಿಸುವ ಕುಡಿಯುವ ನೀರು ಸರಬರಾಜು ಯೋಜನೆಗೆ
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರು ಶಂಕುಸ್ಥಾಪನೆ‌ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ‌ ಶಾಸಕ ಎಂ.ವೈ. ಪಾಟೀಲ ವಹಿಸಿದರು.

ಅಫಜಲಪೂರದ ಶ್ರೀ ಗುರು ಮಳೇಂದ್ರ ಸಂಸ್ಥಾನ ಹಿರೇಮಠದ ಪೂಜ್ಯ ಷ.ಬ್ರ.ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರ ದಿವ್ಯ ಸಾನಿಧ್ಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ನರಸಿಂಹ ನಾಯಕ (ರಾಜುಗೌಡ),
ವಿಧಾನ ಪರಿಷತ್ ಶಾಸಕ ಡಾ. ಬಿ.ಜಿ.ಪಾಟೀಲ, ಅಫಜಲಪುರ ಪುರಸಭೆ ಅಧ್ಯಕ್ಷೆ ರೇಣುಕಾ ರಾಜು ಪಾಟೀಲ, ಉಪಾಧ್ಯಕ್ಷೆ ಕಮಲಾ ತಿಪ್ಪಣ್ಣ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಅರುಣಕುಮಾರ ಪಾಟೀಲ, ಶಿವರಾಜ ಪಾಟೀಲ ರದ್ದೆವಾಡಗಿ, ಮತೀನ್ ಪಟೇಲ್ ಇದ್ದರು..

ವರದಿ. ಬಸವರಾಜ್ ಹಿರೇಮಠ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;