;

ಎಂಪಿ ಪ್ರಕಾಶ್ ಸಮಾಜಮುಖಿ ಟ್ರಸ್ಟ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ…!!!

ದಿನಾಂಕ:-08/03/2022 ರಂದು ಹರಪನಹಳ್ಳಿ ತಾಲೂಕಿನ ಬಾಗಳಿ ಗ್ರಾಮದಲ್ಲಿ ಶ್ರೀ ಎಂಪಿ ಪ್ರಕಾಶ್ ಸಮಾಜಮುಖಿ ಟ್ರಸ್ಟ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಿದ ಹರಪನಹಳ್ಳಿ ಕ್ಷೇತ್ರದ ಜನಪ್ರಿಯ ನಾಯಕಿ ಶ್ರೀಮತಿ,ಎಂಪಿ,ವೀಣಾ,ಮಹಾಂತೇಶ್.

ಭಾರತ ಮಾತೆಯ ಭಾವಚಿತ್ರದ ಮೆರವಣಿಗೆಯ ಮೂಲಕ ವಿಶ್ವ ಮಹಿಳಾ ದಿನಾಚರಣೆಯನ್ನು ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು. ಶಾಲಾ ಮಕ್ಕಳು, ಗ್ರಾಮದ ಯುವತಿಯರು , ಯುವಕರು ಹಾಗೂ ಜಾನಪದ ಕಲಾವಿದರು , ಗ್ರಾಮಸ್ಥರು ಈ ಮೆರವಣಿಗೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡರು.

ಇದೇ ಸಂದರ್ಭದಲ್ಲಿ ಹಲವಾರು
ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾಯ೯ಕ್ರಮದ ಉದ್ಘಾಟನೆಯನ್ನು ಶ್ರೀಮತಿ ರುದ್ರಾಂಬ ಎಂ.ಪಿ.ಪ್ರಕಾಶ್ ಗೌರವಾಧ್ಯಕ್ಷರು ಶ್ರೀ ಎಂ.ಪಿ.ಪ್ರಕಾಶ್ ಸಮಾಜ ಮುಖಿ ಅವರು ನೆರವೇರಿಸಿದರು.

ಈ ಕಾಯ೯ಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಮ.ನಿ.ಪ್ರ. ಚೆನ್ನಬಸವ ಸ್ವಾಮಿಗಳು ಗುಡ್ಡದ ವಿರಕ್ತ ಸಂಸ್ಥಾನ ಮಠ ನೀಲಗುಂದ ಸ್ವಾಮೀಜಿಗಳು ಮಹಿಳೆಯರ ಸಾಧನೆ ಕುರಿತು ಸವಿಸ್ತಾರವಾಗಿ ಮಾತನಾಡಿ ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮೈಲಗೈ ಸಾಧಿಸಿದ್ದಾರೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕರಾದ ಶ್ರೀಮತಿ ಎಂಪಿ ವೀಣಾ ಮಹಾಂತೇಶ್ ಅವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಸಮಾಜದ ವಿವಿಧ ಸ್ತರಗಳಲ್ಲಿ ಮಹಿಳೆಯರ ಸಾಧನೆಯ ಕುರಿತು ಮಾತನಾಡಿದರು.

ಈ ಕಾಯ೯ಕ್ರಮದ ನಿರೂಪಣೆಯನ್ನು ಶಿಕ್ಷಕಿ ಶ್ರೀಮತಿ ಸುಭದ್ರಮ್ಮನವರು ಅಚ್ಚುಕಟ್ಟಾಗಿ ನಿರ್ವಹಿಸಿದರು.

ಇಡೀ ಕಾರ್ಯಕ್ರಮದ ಯಶಸ್ವಿಗೆ
ಕಾರಣರಾದ ಬಾಗಳಿ ಗ್ರಾಮದ ಮುಖಂಡರು,ಗುರು ಹಿರಿಯರು, ಗ್ರಾಮಸ್ಥರು, ಯುವ ಸಮೂಹ ,ಮಹಿಳೆಯರು ಹಾಗೂ ಕಲಾವಿದರು ಬಾಗಳಿ ಯಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದ್ದರು.

ಕಾಯ೯ಕ್ರಮದ ಯಶಸ್ವಿಗೆ ಕಾರಣೀಕತ೯ರಾದ ಎಲ್ಲರಿಗೂ ಶ್ರೀ ಎಂಪಿ ಪ್ರಕಾಶ್ ಸಮಾಜಮುಖಿ ಟ್ರಸ್ಟ್ ವತಿಯಿಂದ ಧನ್ಯವಾದಗಳು…

ವರದಿ. ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;