ತಿಡಿಗೋಳ ಗ್ರಾಮ ಪಂಚಾಯತಿಯಲ್ಲಿ ಮಹಿಳಾ ದಿನಾಚರಣೆ .
ಸಿಂಧನೂರು : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಕೌಶಲ್ಯ ಅಭಿವೃದ್ಧಿ ಉದ್ಯಮ ಶೀಲತೆ ಜೀವನೋಪಾಯ ಇಲಾಖೆ ತಾಲೂಕು ಪಂಚಾಯತ್ ಸಿಂಧನೂರು, ಜಿಲ್ಲಾ ಪಂಚಾಯತ್ ರಾಯಚೂರು ವತಿಯಿಂದ ತಿಡಿಗೋಳ ಗ್ರಾಮ ಪಂಚಾಯತಯಲ್ಲಿ ಇಂದು ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ ರೀತಿಯ ಮನರಂಜನೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು.
ಮಹಿಳೆಯರು ಗುಂಪಿನಲ್ಲಿ ಸಕ್ರಿಯವಾಗಿ ಕ್ರಿಯಾಶೀಲರಾಗಿ ಭಾಗವಹಿಸುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಸ್ವಾವಲಂಬಿಗಳಾಗಿ ಮುಂದೆ ಬರಬೇಕು, ಗುಂಪಿನ ಸಭೆಯಲ್ಲಿ ಭಾಗವಹಿಸಿ ಮಾಹಿತಿಯನ್ನು ಪಡೆದು ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಮುಂದೆ ಬರಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ದೀಪ ಅರಳಿಕಟ್ಟಿ ತಿಳಿಸಿದರು.
ಕಾರ್ಯಕ್ರಮದ ವ್ಯವಸ್ಥಾಪಕ ವೀರಭದ್ರಗೌಡ ಮಾತನಾಡಿ ಸರ್ಕಾರದಿಂದ ಗುಂಪುಗಳಿಗೆ ದೊರೆಯುವ ಸಮುದಾಯ ಬಂಡವಾಳ ನಿಧಿಯ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲೆಯಲ್ಲಿ ಸಿಂಧನೂರು ತಾಲೂಕಿನಲ್ಲಿ ಅತಿ ಹೆಚ್ಚು ವಹಿವಾಟು ನಡೆಸಿದ ಬ್ಯಾಂಕ್ ಸಖೀಯಾಗಿ ಕಾರ್ಯನಿರ್ವಹಿಸಿದ ಶ್ರೀಮತಿ ಸರ್ವಮಂಗಳ ಹಿರೇಮಠ್ ಕುರುಕುಂದ ಇವರಿಗೆ ಹಾಗೂ ಒಕ್ಕೂಟ ಸರಿಯಾಗಿ ಮುನ್ನಡೆಯಲು ಮಾರ್ಗದರ್ಶನ ನೀಡುತ್ತಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸನ್ಮಾನಿಸಲಾಯಿತು. ನಂತರ ಮಹಿಳೆಯರಿಗೆ ಲೆಮನ್ ಸ್ಪೂನ್ , ಮ್ಯಾಜಿಕಲ್ ಚೇರ್ , ಆಟ ಆಡಿಸುವ ಮೂಲಕ ಮನರಂಜನೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು
ಈ ಕಾರ್ಯಕ್ರಮದಲ್ಲಿ ಕಾರ್ಯಕಾರಿ ಸಮಿತಿಯ ಸದಸ್ಯರು ಗುಂಪಿನ ಮಹಿಳೆಯರು, ಮುಖ್ಯ ಪುಸ್ತಕ ಬರಹಗಾರರು ಮಲ್ಲಮ್ಮ ಭಾಗವಹಿಸಿದ್ದರು…

ವರದಿ. ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
