ದಾವಣಗೆರೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಜಿಲ್ಲಾ ಘಟಕ ಜಿಲ್ಲಾ ಪಂಚಾಯತ್ ದಾವಣಗೆರೆ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಹಾಂತೇಶ್ ಬೀಳಗಿ ಬಾ. ಆ .ಸೇ. ಮಾನ್ಯ ಜಿಲ್ಲಾಧಿಕಾರಿಗಳು ದಾವಣಗೆರೆ ಜಿಲ್ಲೆ .
ಶ್ರೀ ಸಿ ಟಿ ರಿಶಂತ್ ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು .ಶ್ರೀಮತಿ ಜಯಮ್ಮ ಗೋಪಿ ನಾಯಕ್ ಪೂಜ್ಯ ಮಹಾಪೌರರು ಮಹಾನಗರ ಪಾಲಿಕೆ ದಾವಣಗೆರೆ .ಶ್ರೀಮತಿ ಗಾಯತ್ರಿ ಬಾಯಿ ಮಹಾಪೌರರು ಪಾಲಿಕೆ ದಾವಣಗೆರೆ .
ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು .
ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ರೇಷ್ಮಾ ಕೌಸರ್. ಭೂದಾಖಲೆಗಳ ಇಲಾಖೆಯ ನಿರ್ದೇಶಕರು ಭಾವನಾ ಬಸವರಾಜ್ ದಾವಣಗೆರೆ. ತಾಲೂಕಿನ ನೂತನ ತಹಶೀಲ್ದಾರ್ ಬಸವನಗೌಡ ಜಿಲ್ಲೆ ಮತ್ತು ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತಿಯಲ್ಲಿ ಇದ್ದರು ಇದೇ ಸಂದರ್ಭದಲ್ಲಿ ಘನತೆಯ ಬದುಕು ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದರು ಜಿಲ್ಲೆ ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸನ್ಮಾನ ಮಾಡಲಾಯಿತು ಮತ್ತು ವಿವಿಧ ಯೋಜನೆಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಮಹಿಳೆಯರಿಗೆ ಸನ್ಮಾನ ಮಾಡಲಾಯಿತು ಜಿಲ್ಲೆಯ ಎಲ್ಲಾ ತಾಲೂಕಿನ ಸ್ವಸಹಾಯ ಸಂಘದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವರದಿ. ರೇಖಾ, ಆರ್, ಲಿಂಗಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
