ರೈತರ ಮನೆ ಬಾಗಿಲಿಗೆ ಕಂದಾಯ ದಾಖಲೆ
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹೊಸಹಳ್ಳಿಯಲ್ಲಿ ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ. ಅಟ್ಲಾಸ್ .ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಗೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನೀಲಮ್ಮ ಬೊಮ್ಮಣ್ಣ ಚಾಲನೆ ನೀಡಿದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಹೊನ್ನೂರಪ್ಪ ಮಾತನಾಡಿ ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು ಇದರಿಂದ ರೈತರು ಕಂದಾಯ ಇಲಾಖೆ ಕಚೇರಿಗೆ ಅಲೆದಾಟ ತಪ್ಪಿಸುವ ಕಾರ್ಯಕ್ರಮ ಇದಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಕಂದಾಯ ಇಲಾಖೆಯ ಗ್ರಾಮಲೆಕ್ಕಾಧಿಕಾರಿಗಳ ಆದ ಮರುಳಸಿದ್ದಪ್ಪ. ಗ್ರಾಮದ ಫಲಾನುಭವಿಗಳಾದ ಕೆ ಸುಭಾಶ್ಚಂದ್ರ ಮತ್ತು ದಂಪತಿ. ಮತ್ತು ಜುಟ್ಟ ಲಿಂಗನ ಹಟ್ಟಿ ಬೊಮ್ಮಣ್ಣ. ನಿವೃತ್ತ ಶಿಕ್ಷಕರಾದ ಮಹಾದೇವಪ್ಪ. ರುದ್ರಮುನಿ. ಎಸ್ ಪಿ ಸಿದ್ದು ಸೇರಿ ಇತರರು ಉಪಸ್ಥಿತರಿದ್ದರು..

ವರದಿ. ವಿರೇಶ್, ಕೆ, ಎಸ್, ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
