;

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ. ಹೈಕೋರ್ಟ್ ತೀರ್ಪು

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ನಿರ್ಬಂಧ ಪ್ರಕರಣ ಸಂಬಂಧ ಹೈಕೋರ್ಟ್​ ತೀರ್ಪು ನೀಡಿದೆ. ಶಾಲೆಯಲ್ಲಿ ಹಿಜಾಬ್​ಗಿಲ್ಲ ಅವಕಾಶ. ಹಿಜಾಬ್​ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್​ ಹೇಳಿದೆ.ಕಾಲೇಜುಗಳಲ್ಲಿ ಹಿಜಾಬ್​ ನಿರ್ಬಂಧಿಸಿರುವ ಕ್ರಮ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರಸಂಹಿತೆ ಜಾರಿ ಸಂಬಂಧ ಕಳೆದ ಫೆ.5ರಂದು ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ 10ಕ್ಕೂ ಅಧಿಕ ಅರ್ಜಿಗಳು ಹಾಗೂ ಮಧ್ಯಂತರ ಅರ್ಜಿಗಳು ಸಲ್ಲಿಕೆಯಾಗಿದ್ದವು.ಸತತ 11 ದಿನ ವಾದ-ಪ್ರತಿವಾದ ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ಥಿ ಹಾಗೂ ನ್ಯಾಯಮೂರ್ತಿಗಳಾದ ಕೃಷ್ಣ ಎಸ್​. ದೀಕ್ಷಿತ್​ ಮತ್ತು ಖಾಜಿ ಜೈಬುನ್ನಿಸಾ ಮೊಹಿದ್ದೀನ್​ ಅವರಿದ್ದ ಪೂರ್ಣಪೀಠ ಫೆ.25ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸುವ ಮೂಲಕ ಹಿಜಾಬ್​ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡಿದೆ…

ವರದಿ.ಮಂಜುನಾಥ್, ಎನ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;