“ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ.
ಸಿಂಧನೂರು : ತಾಲೂಕಿನ ಬಾದರ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಣ್ಣಿಗನೂರು ಗ್ರಾಮದಲ್ಲಿ ಡಿಸಿ ನಡೆ ಹಳ್ಳಿಕಡೆ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ತಾಲೂಕು ನಿರ್ವಹಣಾ ಘಟಕ ಹಾಗೂ ತಾಲೂಕು ಪಂಚಾಯತ್ ಸಹಕಾರದೊಂದಿಗೆ ಕಾರ್ಯಕ್ರಮದಲ್ಲಿ ಒಕ್ಕೂಟದ ಗುಂಪುಗಳಿಗೆ ಸ್ಟಾಲ್ ತೆರೆಯಲು ಅವಕಾಶ ಕಲ್ಪಿಸಲಾಗಿತ್ತು, ಸ್ವರ್ಣ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟ ಹಾಗೂ ಸೌಜನ್ಯ ಸಂಜೀವಿನಿ ಗ್ರಾ.ಪಂ.ಮಟ್ಟದ ಒಕ್ಕೂಟದ ಸ್ವಸಹಾಯ ಗುಂಪಿನ ಮಹಿಳೆಯರು ತಮ್ಮ ಉತ್ಪನ್ನಗಳ ಜೊತೆ ಭಾಗವಹಿಸಿದ್ದರು.
ಮಾನ್ಯ ರಾಹುಲ್ ಎಸ್. ಸುಂಕನೂರು ಸಹಾಯಕ ಆಯುಕ್ತರು ಲಿಂಗಸೂಗೂರು, ತಹಶೀಲ್ದಾರಾದ ಮಂಜುನಾಥ ಭೋಗವತಿ, ಸುದೀಪಕುಮಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು,ಅಮರ ಗುಂಡಪ್ಪ ಸಹಾಯಕ ನಿರ್ದೇಶಕರು ತಾಲೂಕು ಪಂಚಾಯತ,ಪಿಡಿಓ ಬಾದರ್ಲಿ, ಡಾ.ಚನ್ನನಗೌಡ ಪಾಟೀಲ ಸ್ಟಾಲ್ ಗೆ ಭೇಟಿ ನೀಡಿ ಮಹಿಳಾ ಸದಸ್ಯರು ತಯಾರಿಸಿದ ಉತ್ಪನ್ನಗಳನ್ನು ಖರೀದಿಸುವ ಮೂಲಕ ಬೆಂಬಲಿಸಿ ಉತ್ಪನ್ನಗಳ ಮಾರುಕಟ್ಟೆ ಕುರಿತು ತಿಳಿದುಕೊಂಡರು.3400 ರೂಪಾಯಿ ವ್ಯಾಪಾರವಾಯ್ತು
NRLM ಕಾರ್ಯಕ್ರಮ ವ್ಯವಸ್ಥಾಪಕ ವೀರಭದ್ರಗೌಡ ಭಾಗವಹಿಸಿದ್ದರು…

ವರದಿ. ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
