;

ವಿಜಯನಗರದ ಶ್ರೀ ಸಾಯಿಲೀಲಾ ರಂಗ ಮಂದಿರದಲ್ಲಿ ಇಂದು ನಡೆದ ಕಾಂಗ್ರೆಸ್ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನಾ ಸಭೆ…!!!

ಬಳ್ಳಾರಿ ನಗರ ಹಾಗೂ ಬಳ್ಳಾರಿ ಗ್ರಾಮಾಂತರ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯನಗರದ ಶ್ರೀ ಸಾಯಿಲೀಲಾ ರಂಗ ಮಂದಿರದಲ್ಲಿ ಇಂದು ನಡೆದ ಕಾಂಗ್ರೆಸ್ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಮ್ಮ ನೆಚ್ಚಿನ ನಾಯಕರಾದ ಶ್ರೀ ಬಿ. ಮುರಳಿ ಕೃಷ್ಣ ಅವರು ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಸದಸ್ಯರೊಂದಿಗೆ ಸದಸ್ಯತ್ವ ಅಭಿಯಾನದ ಯಶಸ್ವಿ ಪ್ರಗತಿಯ ಕುರಿತು ಮಾತನಾಡಿ ಅವರಲ್ಲಿ ಉತ್ಸಾಹ ತುಂಬಿದರು.

ಈ ಸಂದರ್ಭದಲ್ಲಿ ಬಳ್ಳಾರಿ ಗ್ರಾಮಾಂತರ ಶಾಸಕರಾದ ಬಿ. ನಾಗೇಂದ್ರ, ಹಗರಿಬೊಮ್ಮನಹಳ್ಳಿ ಶಾಸಕರಾದ ಶ್ರೀ ಭೀಮಾ ನಾಯ್ಕ್, ಕಂಪ್ಲಿ ಶಾಸಕರಾದ ಶ್ರೀ ಜೆ.ಎನ್.ಗಣೇಶ್, ಬಳ್ಳಾರಿ ಮಾಜಿ ಸಂಸದರಾದ ವಿ. ಎಸ್. ಉಗ್ರಪ್ಪ, ಸಿರುಗುಪ್ಪ ಮಾಜಿ ಶಾಸಕರಾದ ಟಿ. ಎಂ. ಚಂದ್ರಶೇಖರಯ್ಯ ಸ್ವಾಮಿ, ಸಿರುಗುಪ್ಪ ಮಾಜಿ ನಗರಸಭೆ ಅಧ್ಯಕ್ಷರಾದ ವೆಂಕಟರಾಮ ರೆಡ್ಡಿ, ಕೊರ್ಲಗುಂದಿ ಜಿಲ್ಲಾ ಪಂಚಾಯತ್ ಸದಸ್ಯ ಶ್ರೀ ನರ ಭರತ್ ರೆಡ್ಡಿ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಎಂ.ಹನುಮ ಕಿಶೋರ್, ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಮತ್ತು ಸದಸ್ಯರು ಭಾಗವಹಿಸಿದ್ದರು…

ವರದಿ.ವಿರೇಶ್ ಹಳೇಕೋಟೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;