;

ಕಷ್ಟಗಳ ಮಧ್ಯೆ ಸಾಧನೆ ಮಾಡುವುದೇ ನಿಜವಾದ ಯಶಸ್ಸು: ಸಿದ್ದಪ್ಪ ಕೂಕನಪಳ್ಳಿ…!!!

ಕಷ್ಟಗಳ ಮಧ್ಯೆ ಸಾಧನೆ ಮಾಡುವುದೇ ನಿಜವಾದ ಯಶಸ್ಸು: ಸಿದ್ದಪ್ಪ ಕೂಕನಪಳ್ಳಿ

ಹೊಳಲು (ವಿಜಯನಗರ ಜಿಲ್ಲೆ ): ಕಷ್ಟಗಳ ಮಧ್ಯೆ ಸಾಧನೆ ಮಾಡುವುದೇ ನಿಜವಾದ ಯಶಸ್ಸು ಎಂದು ಹೊಳಲಿನ ಸ್ವಾಮಿ ವಿವೇಕಾನಂದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸಿದ್ದಪ್ಪ ಕೂಕನಪಳ್ಳಿ ಅಭಿಪ್ರಾಯಪಟ್ಟರು. ಅವರು ಕಾಲೇಜಿನಲ್ಲಿ ಆಯೋಜಿಸಿದ್ದ ಸರಸ್ವತಿ ಪೂಜೆ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದರು. ಕೋವಿಡ್ ನಂತರದ ದಿನಗಳಲ್ಲಿ ಸಾಕಷ್ಟು ಕಷ್ಟ, ನೋವುಗಳು ಎಲ್ಲರ ಬದುಕಿನಲ್ಲಿ ಸಂಭವಿಸಿವೆ ಆದರೆ ನೀವೆಲ್ಲರೂ ಅವನ್ನು ಮೆಟ್ಟಿ ನಿಂತು ಉತ್ತಮ ಫಲಿತಾಂಶ ಗಳಿಸಿದರೆ ನಿಮ್ಮ ಮುಂದಿನ ಜೀವನ ಉಜ್ವಲವಾಗಲಿದೆ ಎಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾಲೇಜಿನಲ್ಲಿ 15 ವರ್ಷಗಳ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಕೂಡ್ಲಿಗಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕ ಜೆ.ವೆಂಕಟೇಶ್ ಅವರು ವಿಶೇಷ ಸನ್ಮಾನ ಸ್ವೀಕರಿಸಿ ಮಾತನಾಡಿ ಕಾಲೇಜಿನ ಒಡನಾಟ, ಗ್ರಾಮದವರ ಸಹಕಾರ, ಹೊಳಲು ಹಾಗೂ ಸುತ್ತಮುತ್ತಲಿನ ವಿದ್ಯಾರ್ಥಿಗಳು ಕಲಿಕೆಯಲ್ಲಿ ತೋರಿಸುವ ಉತ್ಸಾಹವನ್ನು ಕೊಂಡಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ವಿಜಯನಗರ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಬಸವರಾಜ್, ಪಿಯುಸಿ ಹಂತವು ಬದುಕಿನ ಅತ್ಯಂತ ಪ್ರಮುಖ ಘಟ್ಟವಾಗಿದ್ದು ಇಲ್ಲಿ ಪಟ್ಟ ಶ್ರಮ ನಮ್ಮನ್ನು ಬಹಳ ಎತ್ತರಕ್ಕೆ ಕೊಂಡೊಯುತ್ತದೆ. ಉತ್ತಮ ಅಂಕಗಳನ್ನು ಪಡೆಯುವುದರ ಜೊತೆಗೆ ಯುವ ಜನತೆಯಾಗಿ ನೀವು ಉತ್ತಮ ದೇಶವನ್ನು ಕಟ್ಟುವ ಕೆಲಸದಲ್ಲೂ ಪಾಲ್ಗೊಳ್ಳಬೇಕು, ಮನೆಗೆ ಉತ್ತಮ ಮಕ್ಕಳಾಗಬೇಕು ಎಂದು ಮಾರ್ಗದರ್ಶನ ಮಾಡಿದರು.

ಈ ಸಂದರ್ಭದಲ್ಲಿ ಹಿಂದಿನ ವರ್ಷಗಳ ಫಲಿತಾಂಶದಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ದತ್ತಿ ಬಹುಮಾನ ನೀಡಿ ಗೌರವಿಸಲಾಯಿತು. ಕಾಲೇಜ್ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಗುಡಗೂರು ಜಯಣ್ಣ, ಹೊಳಲು ಜಿಲ್ಲಾ ಪಂಚಾಯತಿ ಸದಸ್ಯ ಸಿಂಗಟಾಲೂರು ಕೊಟ್ರೇಶ್, ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಚೆನ್ನವೀರನಗೌಡ್ರು, ಹಿರಿಯರಾದ ಬಾಬಣ್ಣ, ಮೌನೇಶಪ್ಪ ಜತ್ತಿ, ನಿವೃತ್ತ ಶಿಕ್ಷಕ ಹನುಮಂತಪ್ಪ ಜಗ್ಗಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಉಪನ್ಯಾಸಕರಾದ ಸಣ್ಣನೀಲಪ್ಪ, ಪ್ರಶಾಂತ್ ಕುಮಾರ್, ಮಲ್ಲಯ್ಯ, ಪರಶುರಾಮ ನಾಗೋಜಿ ಉಪಸ್ಥಿತರಿದ್ದರು. ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪ್ರಾರ್ಥಿಸಿ, ಕಾರ್ಯಕ್ರಮ ನಿರ್ವಹಿಸಿದರು…

ವರದಿ. ಅಜಯ್, ಚ, ಹೂವಿನಹಡಗಲಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;