ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ತಾಯಕನಹಳ್ಳಿ.
ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ತಾಲೂಕು ಅಧ್ಯಕ್ಷರಾಗಿ ಎ. ಜಿ ಮಹಾದೇವಪ್ಪ ಆಯ್ಕೆ
ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿ ಗ್ರಾಮದ ಎ.ಜಿ ಮಹದೇವಪ್ಪ ಇವರನ್ನು ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ತಾಲೂಕು ಅಧ್ಯಕ್ಷರನ್ನಾಗಿ, ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ಜಿಲ್ಲಾಧ್ಯಕ್ಷರಾದ ನಾಗರಾಜ್ ಮಜ್ಜಿಗೆ ಇವರು ಆಯ್ಕೆ ಮಾಡಿ ಆದೇಶ ಮಾಡಿದ್ದಾರೆ. ಈ ಕುರಿತು ನೂತನವಾಗಿ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ತಾಲೂಕ ಅಧ್ಯಕ್ಷರಾಗಿ ಆಯ್ಕೆಯಾಗಿರುವ ತಾಯಕನಹಳ್ಳಿ ಗ್ರಾಮದ ಎ.ಜಿ ಮಹದೇವಪ್ಪ ಇವರನ್ನು ತಾಯಕನಹಳ್ಳಿ ಗ್ರಾಮಸ್ಥರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು . ಮುಖಂಡರು, ಗ್ರಾಮಸ್ಥರು. ಸ್ನೇಹಿತರು ಅಭಿನಂದಿಸಿದ್ದಾರೆ.
ಎ.ಜಿ ಮಹಾದೇವಪ್ಪನವರು ಕುರುಬರ ಸಂಘದ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ, ಸಂಘದ ಸದಸ್ಯರಿಗೆ, ದಲಿತ ಪರ ಸಂಘಟನೆಗಳಿಗೂ ಹಾಗೂ, ವಿವಿಧ ಸಂಘಟನೆಗಳ ಮುಖಂಡರಿಗೆ, ಧನ್ಯವಾದಗಳನ್ನು ತಿಳಿಸಿದ್ದಾರೆ…

ವರದಿ. ಡಿ.ಎಂ.ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
