ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲ್ಲೂಕು. ಚಿಕ್ಕಜೋಗಿಹಳ್ಳಿ.
ಸಂಜೀವಿನಿ ಮಾಸಿಕ ಸಂತೆ–
ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ, ಜೀವನೋಪಾಯ ಇಲಾಖೆ ವಿಜಯನಗರ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕೂಡ್ಲಿಗಿ, ಹಾಗೂ ಹಾಗೂ ಸಂಜೀವಿನಿ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಮತ್ತು ಬೆಳಕು ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಸಂಯೋಗದೊಂದಿಗೆ ದಿನಾಂಕ 4.4 2022ರಂದು ಚಿಕ್ಕಜೋಗಿಹಳ್ಳಿ
ಮಾಕನಡಕು ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮಪಂಚಾಯಿತಿಗಳ ಸಂಜೀವಿನಿ ಒಕ್ಕೂಟಗಳ ಸ್ವಸಹಾಯ ಸಂಘದ ಸದಸ್ಯರುಗಳು ಉತ್ಪಾದಿಸಿದ ವಸ್ತುಗಳನ್ನು ಪ್ರದರ್ಶನ ಮತ್ತು ಮಾರಾಟ ಮೇಳ ಕ್ಕಾಗಿ ಸಂಜೀವಿನಿ ಮಾಸಿಕ ಸಂತೆ ಆಯೋಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ ಮಾಕನಡಕು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಪನಾ ಹೇಮೇಶ್ ಗೌಡ, ಒಕ್ಕೂಟದ ಅಧ್ಯಕ್ಷರಾದ ಶಾಂತಿಬಾಯಿ,nRNLM ಅಧಿಕಾರಿ ನಿಂಗೇಶ್, ಭಾಗವಹಿಸಿದ್ದರು, ಸಂಜೀವಿನಿ ಮಾಸಿಕ ಸಂತೆಯ ಉದ್ದೇಶ ಗ್ರಾಮೀಣ ಭಾಗದಲ್ಲಿರುವ ಸ್ವಸಹಾಯ ಸಂಘ ದಲ್ಲಿ ಇರುವ ಮಹಿಳಾ ಸದಸ್ಯರು ತಮ್ಮ ಕುಟುಂಬ ನಿರ್ವಹಣೆಗಾಗಿ ಉತ್ತಮ ಜೀವನೋಪಾಯ ಕಂಡುಕೊಂಡು ಸಾಮಾಜಿಕ, ಆರ್ಥಿಕ, ಬಲವರ್ಧನೆಗಾಗಿ ಚಟುವಟಿಕೆಗಳನ್ನು ಮಾಡುವುದರೊಂದಿಗೆ ತಮ್ಮ ಕೌಶಲ್ಯಗಳನ್ನು ಬಳಸಿಕೊಂಡು ಉತ್ತಮವಾದ ವಸ್ತುಗಳನ್ನು ಉತ್ಪಾದನೆ ಮಾಡಿದ್ದಾರೆ, ಈ ರೀತಿ ಮಾಡಿದ್ದಲ್ಲಿ ಮಾಸಿಕ ಸಂತೆ ಯಶಸ್ವಿಯಾಗುವುದು ಮತ್ತು ತಮ್ಮ ಕುಟುಂಬಗಳು ಕೂಡ ಉತ್ತಮ ಜೀವನವನ್ನು ಪಡೆಯಬಹುದಾಗಿದೆ. ಇದಕ್ಕೆ ಪೂರಕವಾಗಿ ಜಿಲ್ಲಾ ತಾಲೂಕು ಮಟ್ಟದಲ್ಲಿ ಉತ್ತಮವಾದ ಜೀವನ ಕಲ್ಪಿಸಿಕೊಳ್ಳಲು ತರಬೇತಿ ನೀಡಲಾಗುತ್ತಿದೆ. ಇದರ ಸಹಾಯವನ್ನು ಸಂಘದ ಸದಸ್ಯರು ಪಡೆದುಕೊಳ್ಳಲಿ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲ್ಪನಾ ಹೇಮೇಶ್ ಗೌಡ ಈ ಕಾರ್ಯಕ್ರಮದ ಉದ್ಘಾಟನೆ ಮಾಡಿ ಈ ಸಂದರ್ಭದಲ್ಲಿ ಹೇಳಿದರು. ಸ್ವಸಹಾಯ ಸಂಘದ ಮಹಿಳಾ ಸದಸ್ಯರು ಒಟ್ಟಾಗಿ ಸಂಘಗಳ ರಚಿಸಿಕೊಂಡು ತಮ್ಮ ಜೀವನೋಪಾಯವನ್ನು ಕಂಡುಕೊಳ್ಳಲು ಸಾಲ ಸೌಲಭ್ಯ ವಲ್ಲದೆ ಕೌಶಲ್ಯ ತರಬೇತಿಗಳನ್ನು ಪಡೆದುಕೊಳ್ಳಬಹುದು ಎಂದು ಈ ಸಂಘದ ಅಧ್ಯಕ್ಷರು ಈ ಸಂದರ್ಭದಲ್ಲಿ ತಿಳಿಸಿದರು. ಈ ಕಾರ್ಯಕ್ರಮ ಕುರಿತು ತಾಲೂಕು ಮಟ್ಟದ ಸಂಘದ ಅಧಿಕಾರಿಗಳು ಸವಿಸ್ತಾರವಾಗಿ ಮಾತನಾಡಿದರು.ಈ ಕಾರ್ಯಕ್ರಮದಲ್ಲಿ ಮಾಕನಡಕು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಪನಾ ಹೇಮೇಶ್ ಗೌಡ. ಸಂಘದ ಅಧ್ಯಕ್ಷ ಶಾಂತಿಬಾಯಿ, Nrlm ತಾಲೂಕ ಅಧಿಕಾರಿಗಳಾದ ನಿಂಗೇಶ್ ವೆಂಕ ನಾಯಕ್, ಸ್ವಸಹಾಯ ಸಂಘದ ಮಹಿಳಾ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಪಂಚಾಯಿತಿ ಸಿಬ್ಬಂದಿ, ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು, ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
