ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಮಂತ್ರಿ ಶ್ರೀ ಬಾಬು ಜಗಜೀವನ್ ರಾಮ್ ಅವರ ಜಯಂತಿ ಹಿನ್ನೆಲೆಯಲ್ಲಿ ಇಂದು ಚಳ್ಳಕೆರೆ ನಗರದ ‘ಜಗಜೀವನ್ ರಾಮ್ ಸರ್ಕಲ್’ನಲ್ಲಿ ಬಾಬೂಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು
ಬಳಿಕ ನಗರದ ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಾಬು ಜಗಜೀವನ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯೊಂದಿಗೆ ಗೌರವ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶ್ರೀ ಎನ್. ರಘುಮೂರ್ತಿ, ನಗರಸಭಾ ಆಯುಕ್ತರಾದ ಶ್ರೀಮತಿ ಲೀಲಾವತಿ, ನಗರಸಭೆ ಅಧ್ಯಕ್ಷರಾದ ಶ್ರೀಮತಿ ಸುಮಕ್ಕ ಅಂಜಿನಪ್ಪ, ಉಪಾಧ್ಯಕ್ಷರಾದ ಶ್ರೀಮತಿ ಮಂಜುಳಾ ಪ್ರಸನ್ನಕುಮಾರ್, ನಗರಸಭಾ ಸದಸ್ಯರು, ಸಮಾಜದ ವಿವಿಧ ಮುಖಂಡರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು…

ವರದಿ. ಚಕ್ರಿ ಬಸವರಾಜ್. ಚಳ್ಳಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
