;

ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಹಳ್ಳಿಗಳ ಪಟ್ಟಿ ತಯಾರಿಸಿಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ…!!!

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ
ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಹಳ್ಳಿಗಳ ಪಟ್ಟಿ ತಯಾರಿಸಿ
ಚಿತ್ರದುರ್ಗ: ಜಿಲ್ಲೆಯಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಹಳ್ಳಿಗಳ ಪಟ್ಟಿಗಳನ್ನು ಸಿದ್ಧಪಡಿಸಬೇಕು. ಸರ್ಕಾರದ ನಿರ್ದೇಶನದಂತೆ ಗ್ರಾಮ ಪಂಚಾಯಿತಿಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ ಜರುಗಿಸಿ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಏಪ್ರಿಲ್ ಅಂತ್ಯದವರೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಸಮಸ್ಯೆ ಉಲ್ಭಣಿಸಬಹುದು. ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಮನ್ವಯ ಸಾಧಿಸಿ, ಖಾಸಗಿ ಕೊಳವೆಬಾವಿಗಳನ್ನು ಗುರುತಿಸಬೇಕು. ಮಾಲಿಕರಿಗೆ ತಿಳಿಹೇಳಿ, ಸಂಕಷ್ಟ ಸಂದರ್ಭದಲ್ಲಿ ಕೊಳವೆಬಾವಿಗಳನ್ನು ಸುಪರ್ಧಿಗೆ ಪಡೆದುಕೊಂಡು, ಕುಡಿಯುವ ನೀರಿನ ಕಾಮಗಾರಿಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡಿ, ಸಮರ್ಪಕವಾಗಿ ಕುಡಿಯುವ ನೀರಿನ ಸರಬರಾಜಿಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಬೇಸಿಗೆ ಹಂಗಾಮಿನಲ್ಲಿ ಕುಡಿಯುವ ನೀರು ಸಮಸ್ಯೆ ಉಂಟಾಗದಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಭೆ ನಡೆಸಬೇಕು. ನಂತರ ತಾಲ್ಲೂಕುಮಟ್ಟ ಹಾಗೂ ಜಿಲ್ಲಾ ಮಟ್ಟದ ಸಭೆ ನಡೆಸಿ, ಸಂಪೂರ್ಣ ಯೋಜನೆ ತಯಾರಿಸಬೇಕು. ಟಾಸ್ಕ್ ಪೋರ್ಸ್ ಸಮಿತಿಗೆ ಅಗತ್ಯ ಅನುದಾನ ನೀಡಲಾಗುವುದು ಎಂದು ಹೇಳಿದರು.
ಕೆರೆ ಒತ್ತುವರಿ ತೆರವಿಗೆ ಕ್ರಮವಹಿಸಿ: ಕೆರೆ ಒತ್ತುವರಿ ತೆರವಿಗೆ ಸಂಬಂಧಪಟ್ಟ ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಈ ಕುರಿತು ನ್ಯಾಯಾಲಯಗಳಲ್ಲಿ ವ್ಯಾಜ್ಯ ಬಾಕಿದೆ. ಈ ವಿಷಯದಲ್ಲಿ ಪ್ರಗತಿ ತೋರಿಸದ ಅಧಿಕಾರಿಗಳನ್ನು ನೇರವಾಗಿ ಹೊಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೆರೆಗಳಿಗೆ ಕೊಳಚೆ ನೀರು ಸೇರಿದಂತೆ ನೋಡಿಕೊಳ್ಳಬೇಕು. ಕೆರೆ ಸುತ್ತಲಿನ ಹಸಿರು ವಲಯದಲ್ಲಿ ಗಿಡಮರಗಳನ್ನು ನೆಡಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.
ಗ್ರಾಮಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಸಲುವಾಗಿ ಕಟ್ಟಿರುವ ತೊಟ್ಟಿಗಳಲ್ಲಿ ನೀರು ತುಂಬಿಸಬೇಕು. ಅನಾವಶ್ಯಕ ನೀರು ಪೋಲು ಆಗುವುದು ತಡೆಯಬೇಕು. ಜಿಲ್ಲಾ, ತಾಲ್ಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೇಸಿಗೆ ಕಾಲದ ರೋಗಗಳಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ನೀಡಬೇಕು ಎಂದರು.
ಸಭೆಯಲ್ಲಿ ತಹಶೀಲ್ದಾರ್‍ಗಳು ಹಾಗೂ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲ್ಲೂಕುಗಳ ಕುಡಿಯುವ ನೀರಿನ ಪರಿಸ್ಥಿತಿ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಓ ಡಾ.ಕೆ.ನಂದಿನಿದೇವಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು

f

ವರದಿ. ಶಶಿಕುಮಾರ್, ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;