ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಜಯಂತಿ…!!!

ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಜಯಂತಿ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹೊಸಹಳ್ಳಿ ನಾಡಕಚೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಪ್ರಭಾರಿ ಉಪ ತಹಶೀಲ್ದಾರ್ ಮುರಳಿಕೃಷ್ಣ ಮಾತನಾಡಿ ಸಮಾಜದಲ್ಲಿ ತುಳಿತಕ್ಕೊಳಗಾದವರ ಪರವಾಗಿ ನ್ಯಾಯಯುತ ಹಕ್ಕುಗಳಿಗಾಗಿ ಹೋರಾಟ ಮಾಡಿ ಸಂವಿಧಾನಬದ್ಧ ಹಕ್ಕುಗಳನ್ನು ಕೊಡಿಸುವಲ್ಲಿ ಶ್ರಮಿಸಿದ ಮಹಾನ್ ಚೇತನ ಅಂಬೇಡ್ಕರ್ ಎಂದರು.
ನಂತರ ಗ್ರಾಮ ಪಂಚಾಯಿತಿ ಸದಸ್ಯರಾದ ಎಂ ಹೊನ್ನೂರು ಸ್ವಾಮಿ ಮಾತನಾಡಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಆಶ್ರಯ ದಂತೆ ದೇಶದ ಜನರಿಗೆ ಉಚಿತ ಶಿಕ್ಷಣ ಉಚಿತ ಆರೋಗ್ಯ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಶೋಷಿತರಿಗೆ ದಲಿತರಿಗೆ ದೊರಕುವಂತಾಗಬೇಕು.
ಕೇವಲ ಕೆಲ ಸಮುದಾಯಗಳಿಗೆ ಸೀಮಿತವಾಗಿದ್ದ ಶಿಕ್ಷಣವನ್ನು ಪ್ರತಿಯೊಬ್ಬರಿಗೂ ಸಂವಿಧಾನದ ಮೂಲಕ ಸಂವಿಧಾನಬದ್ಧವಾಗಿ ನೀಡುವ ಮೂಲಕ ಪ್ರತಿಯೊಬ್ಬರಲ್ಲಿ ಪ್ರಶ್ನಿಸುವ ಹಕ್ಕನ್ನು ಜಾಗೃತಗೊಳಿಸಿದ ಮಹಾನ್ ನಾಯಕ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಗ್ರಾಮಲೆಕ್ಕಾಧಿಕಾರಿ ಗಳಾದ ಮರುಳಸಿದ್ದಪ್ಪ. ಶ್ರೀನಿವಾಸ ಕೊಂಡಿ. ಹಾಗೂ ಮುಖಂಡರುಗಳಾದ ಬಯಲು ತುಂಬರಗುದ್ದಿ ದುರ್ಗೇಶ್. ಹೇಮಂತ್. ಕೆ ಸುಭಾಷ್ ಚಂದ್ರ. ಸಿದ್ದಲಿಂಗನಗೌಡ. ವೀರೇಶ್ ಕಿಟ್ಟಪ್ಪ ನವರ್ . ಕುಂಬಾರ ಹನುಮಂತಪ್ಪ. ಸೇರಿ ಅನೇಕ ದಲಿತ ಮುಖಂಡರು ಇತರರು ಸಾರ್ವಜನಿಕರು ಉಪಸ್ಥಿತರಿದ್ದರು..

ವರದಿ.ವಿರೇಶ್, ಕೆ, ಎಸ್, ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend