ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಬಣವಿಕಲ್ಲು ಗ್ರಾಮ ಪಂಚಾಯಿತಿಯಲ್ಲಿ ಇಂದು ದಿನಾಂಕ.24 /4/2022ರ ಭಾನುವಾರ ವಿಶೇಷ ಗ್ರಾಮ ಸಭೆ ನಡೆದಿದ್ದು ಈ ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಸದಸ್ಯರಾದ ಪೂರ್ಣಿಮಾ ಪ್ರಶಾಂತ್ ಗೌಡ ಆರ್ ವೀರಣ್ಣ ಮತ್ತು ಎನ್ ಗುರುಸ್ವಾಮಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು. ಸಭೆಯನ್ನು ಉದ್ದೇಶಿಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಬಸಮ್ಮ ಮಾತನಾಡಿ ಉದ್ಯೋಗ ಖಾತ್ರಿ ಯೋಜನೆಯ ಕೆಲಸದ ಬಗ್ಗೆ ಕೂಲಿ ಕಾರ್ಮಿಕರಿಗೆ ಮಾಹಿತಿಯನ್ನು ನೀಡಿದರು, ಇದೇ ಸಂದರ್ಭದಲ್ಲಿ ಪಂಚಾಯಿತಿ ಕಾರ್ಯದರ್ಶಿಗಳಾದ ಹಾಲಸ್ವಾಮಿ ಯವರು ಸರ್ಕಾರದಿಂದ ಬರುವ ಯೋಜನೆಯ ಲಾಭವನ್ನು ಪಡೆದುಕೊಳ್ಳುವುದರ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಸಲಹೆ ನೀಡಿದರು . ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಯವರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿವೃದ್ಧಿ ಸಂಸ್ಥೆಯ ನಿರ್ವಾಹಕರಾದ ಮಧುಸೂದನ್ ರವರು ಹಾಜರಿದ್ದರು…

ವರದಿ.ಬಿ. ಎಂ. ಬಸಪ್ಪ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
