;

ಲಂಚ ಪಡೆದು ಎಸಿಬಿ ಬಲೆಗೆ ಬಿದ್ದ ಗ್ರಾಮಲೆಕ್ಕಿಗ…!!!

ಚಾಮರಾಜನಗರ: ಜಮೀನಿನ ಖಾತೆ ಮಾಡಿಕೊಡಲು ರೈತರಿಂದ ತಹಸೀಲ್ದಾರ್ ಕಛೇರಿಯಲ್ಲಿ ಲಂಚ ಸ್ವೀಕಾರ ಮಾಡುವಾಗ ಗ್ರಾಮಲೆಕ್ಕಿರೊಬ್ಬರು ಎಸಿಬಿ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯ ಹನೂರಿನಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿರುವ ತಹಸೀಲ್ದಾರ್ ಕಚೇರಿಯ ಗ್ರಾಮಲೆಕ್ಕಿಗ ದಿನೇಶ್ ಎಸಿಬಿ ಬಲೆಗೆ ಬಿದ್ದವರು.ಚಾಮರಾಜನಗರ: ಜಮೀನಿನ ಖಾತೆ ಮಾಡಿಕೊಡಲು ರೈತರಿಂದ ತಹಸೀಲ್ದಾರ್ ಕಛೇರಿಯಲ್ಲಿ ಲಂಚ ಸ್ವೀಕಾರ ಮಾಡುವಾಗ ಗ್ರಾಮಲೆಕ್ಕಿರೊಬ್ಬರು ಎಸಿಬಿ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯ ಹನೂರಿನಲ್ಲಿ ನಡೆದಿದೆ.

ಗ್ರಾಮಲೆಕ್ಕಿಗ ದಿನೇಶ್ ರಾಮಪುರ ಹೋಬಳಿಯ ಕುರಟ್ಟಿ ಹೊಸೂರು ವೃತ್ತದ ಗ್ರಾಮಲೆಕ್ಕಿಗರಾಗಿದ್ದು ಜಮೀನಿನ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ರೈತರೊಬ್ಬರಿಂದ 10 ಸಾವಿರ ರೂಪಾಯಿಗೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ರೈತರು ಎಸಿಬಿ ಅಧಿಕಾರಿಗಳಿಗೆ ಲಿಖಿತವಾಗಿ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಡಿವೈಎಸ್ಪಿ ಸದಾನಂದ ತಿಪ್ಪಣ್ಣವರ್, ಇನ್ಸ್‌ಪೆಕ್ಟರ್ ಹರೀಶ್ ಹಾಗೂ ಸಿಬ್ಬಂದಿ ನಾಗಲಕ್ಷ್ಮಿ ಮಹದೇವಸ್ವಾಮಿ ಕೃಷ್ಣಕುಮಾರ್ ದಾಳಿ ನಡೆಸಿ ಗ್ರಾಮ ಲೆಕ್ಕಿಗ ದಿನೇಶ್ ನನ್ನು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಡಿವೈಎಸ್ಪಿ ಸದಾನಂದ ತಿಪ್ಪಣ್ಣವರ್ ಮಾತನಾಡಿ ಯಾವುದೇ ಕಾರಣಕ್ಕೂ ದೂರುದಾರರ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ವಶಕ್ಕೆ ಪಡೆದಿರುವ ಗ್ರಾಮಲೆಕ್ಕಾಧಿಕಾರಿಯನ್ನು ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದಾಗಿ ಹೇಳಿದ್ದಾರೆ…

 

ವರದಿ. ಎಚ್ಚರಿಕೆ ಕನ್ನಡ ನ್ಯೂಸ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;