;

ಕೂಡ್ಲಿಗಿ:ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ವತಿಯಿಂದ 5ನೇ ಜಿಲ್ಲಾ ಸಮ್ಮೇಳನ…!!!

ವಿಜಯನಗರ ಜಿಲ್ಲೆ.ಕೂಡ್ಲಿಗಿ ತಾಲೂಕು.
ಕೂಡ್ಲಿಗಿ:ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ವತಿಯಿಂದ 5ನೇ ಜಿಲ್ಲಾ ಸಮ್ಮೇಳನ
ಸಿಐಟಿಯು ನೇತೃತ್ವದಲ್ಲಿ ಅವಳಿ ಜಿಲ್ಲೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವತಿಯಿಂದ ಪಟ್ಟಣದ ಚಂದ್ರಶೇಖರ ಆಜಾದ್ ರಂಗಮಂದಿರದಲ್ಲಿ ಕಟ್ಟಡ ಕಾರ್ಮಿಕರ 5ನೇ ಜಿಲ್ಲಾ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು.
ಸಮ್ಮೇಳನದ ಅಂಗವಾಗಿ ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ಕಟ್ಟಡ ಕಾರ್ಮಿಕರು ಗಾಂಧಿ ಚಿತಾಭಸ್ಮ ವಿರುವ ಹುತಾತ್ಮರ ಸ್ಮಾರಕದಿಂದ ಚಂದ್ರಶೇಖರ ಆಜಾದ್ ರಂಗಮಂದಿರದವರೆಗೆ ಮೆರವಣಿಗೆ ನಡೆಸಿ ನಂತರ ಅಜಾದ್ ರಂಗಮಂದಿರದ ಕಾರ್ಯಕ್ರಮಕ್ಕೆ ಬರಲಾಯಿತು.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾನೂನು ಹಾಗೂ ಸೆಸ್ ಕಾನೂನು 1996 ರಕ್ಷಣೆಗಾಗಿ ದೇಶಾದ್ಯಂತ ರಚನೆಯಾಗಿರುವ ಕಲ್ಯಾಣ ಮಂಡಳಿ ಉಳಿಸಬೇಕು, ಕಟ್ಟಡ ಸಾಮಾಗ್ರಿಗಳ ಬೆಲೆಗಳ ನಿಯಂತ್ರಿಸಬೇಕು, ಲಾಕ್ ಡೌನ್ ಸಂದರ್ಭದಲ್ಲಿ ₹ 3 ಸಾವಿರ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ ಎಲ್ಲರಿಗೂ ಹಣ ಪಾವತಿ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಹಕ್ಕೊತ್ತಾಯವನ್ನು ಸಮ್ಮೇಳನದಲ್ಲಿ ಮಂಡಿಸಲಾಯಿತು.
ಸಮ್ಮೇಳನಕ್ಕೆ ಚಾಲನೆ ನೀಡಿದ ಹಂಪಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಟಿ.ಆರ್. ಚಂದ್ರಶೇಖರ್ ಮಾತನಾಡಿ, ಉಚಿತ ಯೋಜನೆಗಳಿಂದ ಕಾರ್ಮಿಕರು ಸೋಮಾರಿಗಳಾಗುತ್ತಿದ್ದಾರೆ ಎಂದು ಕೆಲವರು ಹೇಳುತ್ತಿದ್ದು, ಈ ಮಾತಿಗಿಂತ ಹೀನಾಯವಾದ ಮಾತು ಮತ್ತೊಂದಿಲ್ಲ ಎಂದು ಕಿಡಿ ಕಾರಿದರು.
ಈ ಭಾಗದಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ದುಡಿಮೆಯಲ್ಲಿ ತೊಡಗಿರುವ ಕಾರ್ಮಿಕರಲ್ಲಿ ಅಪೌಷ್ಟಿಕತೆ ಕಾಡುತ್ತಿದೆ. ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ ಸಂಚಾರಿ ಅಂಗನವಾಡಿಗಳನ್ನು ತೆರೆದು, ಅವುಗಳ ಮೂಲಕ ಮೂಲಕ ಪೌಷ್ಟಿಕ ಆಹಾರ ವಿತರಣೆ ಮಾಡಬೇಕು. ಮೊಟ್ಟೆ ಉತ್ತಮ ಪೌಷ್ಟಿಕ ಆಹಾರ ವಾಗಿದ್ದು ಅದನ್ನು ಕೊಡುವುದಕ್ಕೆ ಕೆಲ ಸ್ವಾಮಿಗಳು ವಿರೋಧಿಸುತ್ತಿರುವುದು ಸರಿಯಲ್ಲ. ಕಾರ್ಮಿಕ ಮಂಡಳಿಯಲ್ಲಿ ಸಾವಿರಾರು ಕೋಟಿ ಹಣವಿದ್ದರೂ ಅಗತ್ಯೆ ಸೌಲಭ್ಯಗಳನ್ನು ಕಾರ್ಮಿಕರಿಗೆ ನೀಡುವವಲ್ಲಿ ಸರ್ಕಾರ ಸಪಲವಾಗಿಲ್ಲ ಎಂದು ದೂರಿದರು.
ಸಿಡಬ್ಲ್ಯೂಎಫ್ ಐ ಜಿಲ್ಲಾಧ್ಯಕ್ಷ ಎನ್. ಯಲ್ಲಲಿಂಗರಾಜ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಮಾಂತೇಶ್, ಸಿಐಟಿಯು ಜಿಲ್ಲಾಧ್ಯಕ್ಷ ಭಾಸ್ಕರ್ ರೆಡ್ಡಿ ಜಿಲ್ಲಾ ಕಾರ್ಯದರ್ಶಿ ಸತ್ಯ ಬಾಬು, ಆರ್.ಎಸ್. ಬಸವರಾಜ್, ಮುಖಂಡರಾದ ಜಗನ್ನಾಥ್ ಸಿ. ವಿರುಪಾಕ್ಷಪ್ಪ ಗುನ್ನಳ್ಳಿ ರಾಘವೇಂದ್ರ ತುಂಬರಗುದ್ದಿ ಚಂದ್ರು ಪಾಂಡುರಂಗ ದೇವರಾಜ್ ಇದ್ದರು…

ವರದಿ.ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;