ಇಂದು ಸನ್ಮಾನ್ಯ ವಸತಿ ಸಚಿವರಾದ ಶ್ರೀ ವಿ. ಸೋಮಣ್ಣ ಅವರು “ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) – ಸರ್ವರಿಗೂ ಸೂರು” ಯೋಜನೆಯಡಿ 1008 ಮನೆಗಳ ನಿರ್ಮಾಣಕ್ಕೆ ಚಳ್ಳಕೆರೆಯ ಪಾವಗಡ ರಸ್ತೆಯಲ್ಲಿರುವ ಕೆ.ಹೆಚ್.ಬಿ. ಲೇಔಟ್ ನಲ್ಲಿ ಶಂಕುಸ್ಥಾಪನೆ ನೆರವೇರಿಸಲಾಯಿತು
ವಸತಿ ಇಲಾಖೆ, ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ, ಚಿತ್ರದುರ್ಗ ಜಿಲ್ಲಾಡಳಿತ ಹಾಗೂ ಚಳ್ಳಕೆರೆ ನಗರಸಭೆ ಸಂಯುಕ್ತಾಶ್ರಯದಲ್ಲಿ ಈ ಶಂಕುಸ್ಥಾಪನೆ ಸಮಾರಂಭ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀಮತಿ ಕವಿತಾ ಮನ್ನೀಕೇರಿ, ತಹಶೀಲ್ದಾರ್ ಶ್ರೀ ಎನ್. ರಘುಮೂರ್ತಿ, ನಗರಸಭಾ ಆಯುಕ್ತರಾದ ಶ್ರೀಮತಿ ಲೀಲಾವತಿ, ನಗರಸಭೆ ಅಧ್ಯಕ್ಷೆ ಶ್ರೀಮತಿ ಸುಮಕ್ಕ ಅಂಜಿನಪ್ಪ, ಉಪಾಧ್ಯಕ್ಷರಾದ ಶ್ರೀಮತಿ ಮಂಜುಳಾ ಪ್ರಸನ್ನಕುಮಾರ್, ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ರುದ್ರನಾಯಕ, ನಗರಸಭಾ ಸದಸ್ಯರುಗಳು ಹಾಗೂ ವಸತಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು…

ವರದಿ.ಶಶಿಕುಮಾರ್ ಚಳ್ಳಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
