ಚಿತ್ತಾಪುರ ತಾಲೂಕಿನಲ್ಲಿ ವಾಂತಿ ಭೇದಿ:
ಜಿಮ್ಸ್ ನಲ್ಲಿ ರೋಗಿಗಳಿಗೆ ಭೇಟಿ ಮಾಡಿದ ಸಂಸದ ಡಾ.ಉಮೇಶ ಜಾಧವ
ಕಲಬುರಗಿ-ಚಿತ್ತಾಪುರ ತಾಲ್ಲೂಕಿನ ದಂಡೋತಿ ಗ್ರಾಮದಲ್ಲಿ ಬುಧವಾರದಂದು ಕಲುಷಿತ ನೀರು ಸೇವಿಸಿ ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ಜಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳನ್ನು ಲೋಕಸಭಾ ಸದ್ಯಸ ಡಾ.ಉಮೇಶ ಜಾಧವ ಅವರು ಗುರುವಾರ ಭೇಟಿ ಮಾಡಿ, ಆರೋಗ್ಯವನ್ನು ವಿಚಾರಿಸಿದರು.
ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಕುಮಾರ ಅವರ ಜೊತೆ ಚರ್ಚಿಸಿ ವಾಂತಿ-ಭೇದಿಯಿಂದ ಬಳಲುತ್ತಿರುವ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡಬೇಕೆಂದು ಸೂಚಿಸಿದರು.
ನಂತರ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರನ್ನು ಭೇಟಿ ಮಾಡಿದ ಸಂಸದರು ಗ್ರಾಮದಲ್ಲಿ ಕಲುಷಿತ ನೀರಿನ ಕುರಿತು ಸಮಸ್ಯೆಯನ್ನು ಪರಿಶೀಲನೆ ಮಾಡಿ, ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದರು.
ಚಿತ್ತಾಪೂರ ತಾಲ್ಲೂಕಿನಲ್ಲಿ 75 ವಾಂತಿ-ಭೇದಿ ರೋಗಿಗಳಿದ್ದು, ಅದರಲ್ಲಿ ಒಬ್ಬ ರೋಗಿಯನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ 74 ರೋಗಿಗಳನ್ನು ಚಿತ್ತಾಪುರ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅವರ ಆರೋಗ್ಯಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ತಾಲ್ಲೂಕಿನ ಆರೋಗ್ಯ ಅಧಿಕಾರಿಗಳಿಗೆ ಸೂಚಿಸುವಂತೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರ ಡಾ.ಗಿರೀಶ್ ಬದೋಲೆ, ಮೆಡಿಕಲ್ ಅಧೀಕ್ಷಕ ಡಾ.ಎಸ್.ಎಸ್.ಶಫಿಯುದ್ದೀನ್, ಕಾಲರಾ ನಿಯಂತ್ರಣ ಅಧಿಕಾರಿ ಡಾ.ಚಂದ್ರಕಾಂತ್ ನರಿಬೋಳ ಉಪಸ್ಥಿತರಿದ್ದರು…

ವರದಿ. ವಿರೇಶ್, ಎಂ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
