ಗಾಂಧಿ ಕಥನದ ಲೇಖಕ, ಕೇಂದ್ರ ಸಾಹಿತ್ಯ ಅಕಾಡೆಮಿ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿಎಸ್ ನಾಗಭೂಷಣ ನಿಧನ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ (70) ಬುಧವಾರ ರಾತ್ರಿ ನಿಧನರಾಗಿದ್ದಾರೆ.
ನಾಗಭೂಷಣ್ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿಮ್ಮಸಂದ್ರದವರು. ಸದ್ಯ ಶಿವಮೊಗ್ಗ ವಿನೋಬನಗರದ ಕಲ್ಲಹಳ್ಳಿಯಲ್ಲಿ ಪತ್ನಿ ಲೇಖಕಿ ಸವಿತಾ ನಾಗಭೂಷಣ ಅವರೊಂದಿಗೆ ನೆಲೆಸಿದ್ದರು.
👉ನಾಗಭೂಷಣ್ ಕಿರು ಪರಿಚಯ
ಗಣಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಡಿ.ಎಸ್.ನಾಗಭೂಷಣ 1952 ಫೆಬ್ರವರಿ 1ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲೂಕಿನ ತಿಮ್ಮಸಂದ್ರದಲ್ಲಿ ಜನಿಸಿದರು. ದೆಹಲಿ ಆಕಾಶವಾಣಿಯಲ್ಲಿ ಕನ್ನಡ ವಾರ್ತಾ ವಾಚಕರಾಗಿ 1975ರಿಂದ 1981ರವರೆಗೆ ಸೇವೆ ಸಲ್ಲಿಸಿದ್ದರು. ಆ ನಂತರದಲ್ಲಿ ಸಹಾಯಕ ನಿಲಯ ನಿರ್ದೇಶಕರಾಗಿ 7 ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು. 2005ರಲ್ಲಿ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದ ಅವರು, ಓದು, ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡಿದ್ದರು.

ವರದಿ. ಮಂಜುನಾಥ್, ಎನ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
