ರಾಜ್ಯ ಸರ್ಕಾರ ಶಿಕ್ಷಣದ ಕಡೆ ಹೆಚ್ಚು ಒಲವು ತೋರುತ್ತಿದೆ – ಸಚಿವ ಬಿ.ಸಿ.ನಾಗೇಶ್…!!!

ರಾಜ್ಯ ಸರ್ಕಾರ ಶಿಕ್ಷಣದ ಕಡೆ ಹೆಚ್ಚು ಒಲವು ತೋರುತ್ತಿದೆ – ಸಚಿವ ಬಿ.ಸಿ.ನಾಗೇಶ್.

ಸಿಂಧನೂರು : ಮೇ.29.ಶಿಕ್ಷಣ ಇಲಾಖೆಯ ಬಗ್ಗೆ ಆಸಕ್ತಿ ಹೊಂದಿರುವ ಶಾಸಕರು ಹಾಗೂ ಸಂಸದರು ನಿಮ್ಮ ಬಾಗದಲ್ಲಿ ಇದಾರೆ. ರಾಜ್ಯ ಸರ್ಕಾರ ಶಿಕ್ಷಣದ ಕಡೆ ಹೆಚ್ಚು ಒಲವು ತೋರುತ್ತಿದ್ದು,ಕೊವಿಡನಿಂದ ಮಕ್ಕಳಲ್ಲಿ ಸ್ವಲ್ಪ ಮಟ್ಟಿಗೆ ವ್ಯತ್ಯಾಸವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ.ನಾಗೇಶ್ ಅವರು ಹೇಳಿದರು.

ಇಂದು ಜವಳಗೇರಾ ಗ್ರಾಮದಲ್ಲಿ 2ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕರ್ನಾಟಕ ಪಬ್ಲಿಕ್ ಶಾಲೆಗೆ ಅಡಿಗಲ್ಲು,ಸಾಲಗುಂದ ಗ್ರಾಮದಲ್ಲಿ ನಿರ್ಮಾಣಗೊಂಡ ಪ್ರೌಢ ಶಾಲೆ ಉದ್ಘಾಟನೆ,ಕ್ಷೇತ್ರದ ರೌಡಕುಂದ, ಗಾಂಧಿನಗರ ಹಾಗೂ ವಲ್ಕಮದಿನ್ನಿ ಗ್ರಾಮಗಳಲ್ಲಿ ಪ್ರೌಡ ಶಾಲೆ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು, 409.32 ಲಕ್ಷ ರೂ.ಗಳ ವೆಚ್ಚದಲ್ಲಿ ಶಾಲೆ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು, ಕಾಮಗಾರಿ ಸಂಪೂರ್ಣಗೊಂಡ ಶಾಲಾ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಕಳೆದ ನಾಲ್ಕು ವರ್ಷದಲ್ಲಿ ರಾಜ್ಯದಲ್ಲಿ ಒಟ್ಟು ಏಳು ಸಾವಿರ ಶಾಲೆಯ ತರಗತಿ ಕೊಠಡಿಗಳ ನಿರ್ಮಾಣ ಕಾರ್ಯ ಮಾಡಿದೆ. 15 ಸಾವಿರ ಡಿಪಿಟಿ ಮೂಲಕ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಶಾಲೆ ಪ್ರಾರಂಭದಲ್ಲಿಯೇ ಅತಿಥಿ ಶಿಕ್ಷಕರನ್ನು ತೆಗೆದುಕೊಳ್ಳಲಾಗಿದೆ.ಕಲಿಕಾ ಚೇತರಿಕೆ ಮೂಲಕ ಶಾಲೆಯ ಅಬಿವ್ರದ್ದಿ ತರಲು ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಲಾಗಿದೆ. ಶಿಕ್ಷಣದಲ್ಲಿ ಹಿಂದುಳಿದ ರಾಜ್ಯದ 93 ಪ್ರದೇಶಗಳನ್ನು ಗುರುತಿಸಲಾಗಿದ್ದು, ಶಿಕ್ಷಣದ ಪ್ರಗತಿಗೆ ವಿಶೇಷ ಗಮನ ಹರಿಸಲಾಗುವುದು, ಜೊತೆಗೆ ಸರ್ಕಾರಿ ಶಾಲೆಗಳು ಮೂಲ ಸೌಕರ್ಯದಿಂದ ವಂಚಿತ ಆಗಬಾರದು ಎಂಬ ಉದ್ದೇಶದಿಂದ ತರಗತಿಯಲ್ಲಿ ಶೌಚಾಲಯ, ಪ್ರಯೋಗಾಲಯ ಸೇರಿದಂತೆ ಬೇಡಿಕೆ ಇರುವ ಕಡೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ಕಂಕಣಬದ್ಧವಾಗಿದೆ ಎಂದು ಹೇಳಿದರು.

ನಂತರ ಮಾತನಾಡಿದ ಶಾಸಕ ವೆಂಕಟರಾವ್ ನಾಡಗೌಡ ಅವರು ಕೊರೋನಾದ ನಂತರ ದಿನಗಳಲ್ಲಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದು, ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ.ತಾಲೂಕಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇಲ್ಲದ ಕಾರಣ ಶಿಕ್ಷಣ ಸಚಿವರು ಹೆಚ್ಚಿನ ಅನುದಾನ ಬಿಡುಗಡೆ ಮಾಡುವ ಮೂಲಕ ಸುಸಜ್ಜಿತವಾದ ಕಟ್ಟಡ ನಿರ್ಮಾಣಕ್ಕೆ ಸಹಕಾರ ನೀಡಬೇಕೆಂದರು. ಕಟ್ಟಕಡೆಯ ವ್ಯಕ್ತಿಯು ಶಿಕ್ಷಣ ಪಡೆಯಬೇಕು ಮಕ್ಕಳಿಗಾಗಿ ಆಸ್ತಿ ಮಾಡುವ ಅವಶ್ಯಕತೆ ಇಲ್ಲ. ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪ್ರತಿಯೊಬ್ಬರೂ ಕೊಡಿಸಬೇಕೆಂದ್ದರು.

ರಾಯಚೂರು, ಕೊಪ್ಪಳ ಲೋಕ ಸಭಾ ಸದಸ್ಯ ಸಂಗಣ್ಣ ಕರಡಿ ಅವರು ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡಿದಲ್ಲಿ ಮಾತ್ರ ಮನುಷ್ಯ ಎಲ್ಲಾದರೂ ಬದುಕಬಹುದು, ಶಿಕ್ಷಣದಿಂದ ಸರ್ವಾಂಗೀಣ ಅಭಿವೃದ್ಧಿ ಸಾದ್ಯ. ಶಿಕ್ಷಣ ಕಲೆತ ವ್ಯಕ್ತಿಯ ಗೌರವ ಬೇರೆಯಾಗಿರುತ್ತದೆ ಎಲ್ಲಾ ರೀತಿಯ ಬದುಕನ್ನು ಕಟ್ಟಿಕೊಳ್ಳಬಹುದು ಮಾನಸಿಕ ಸ್ಥೈರ್ಯವನ್ನು ಹೆಚ್ಚು ಮಾಡುತ್ತದೆ. ಜಗತ್ತಿನಲ್ಲಿ ಭಾರತವನ್ನು ವಿಶ್ವಗುರು ಮಾಡಲು ಪ್ರಧಾನಮಂತ್ರಿಗಳು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ಪ್ರಾಸ್ತವಿಕವಾಗಿ ಸಿಂಧನೂರು ಕ್ಷೇತ್ರ ಶಿಕ್ಷಣಾಧಿಕಾರಿ ಶರಣಪ್ಪ ವಟಗಲ್ ಅವರು ಮಾತನಾಡಿ, ತಾಲೂಕಿನಲ್ಲಿ ಶೇ 70 ರಷ್ಟು ಪಠ್ಯ ಪುಸ್ತಕ ಪೂರೈಕೆಯಾಗಿದ್ದು, ಅವುಗಳನ್ನು ಶಾಲಾ ಮಕ್ಕಳಿಗೆ ವಿತರಣೆ ಮಾಡಲಾಗುತ್ತದೆ ಎಂದರು. ಶೈಕ್ಷಣಿಕ ವರ್ಷಗಳಲ್ಲಿ ಕಲಿಕಾ ಚೇತರಿಕಾ ಉಪಕ್ರಮದಡಿ ಕೋವಿಡ್-19ರಿಂದ ಶಾಲಾ ಮಕ್ಕಳ ಕಲಿಕೆಯಲ್ಲಿ ಕೊರತೆ ಅನುಭವಿಸುತ್ತಿದ್ದನ್ನು ಮನಗಂಡು ಶಿಕ್ಷಣ ಇಲಾಖೆ ಕಲಿಕಾ ಚೇತರಿಕೆ ಉಪಕ್ರಮದ ಪರಿಣಾಮಕಾರಿ ಅನುಷ್ಠಾನದ ಮೂಲಕ ಕಲಿಕೆಯ ಕೊರತೆಯನ್ನು ತುಂಬಿಕೊಡಲು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ತಾಲೂಕಿನ ಎಲ್ಲಾ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ ಎಂದರು.

ವಿದ್ಯಾರ್ಥಿಗಳಿಗೆ ಸನ್ಮಾನ: ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿನಲ್ಲಿ ಶೇ.84.40%ರಷ್ಟು ಫಲಿತಾಂಶ ಪಡೆದು ಜಿಲ್ಲೆಯಲ್ಲಿ ಮೂರನೇ ಸ್ಥಾನ ಪಡೆದಿದ್ದು, 625 ಅಂಕಗಳಿಗೆ 624 ಅಂಕಗಳು ಪಡೆದು ತಾಲೂಕಿಗೆ ಕೀರ್ತಿಯನ್ನು ಹೆಚ್ಚಿಸಿದ ಬಸವಲೀಲಾ, ಪೂಜೆ ಎಚ್,ಸಮಾನಾ,ಈ ಮೂರು ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ,ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಧ್ವರಾಜ್, ಪಿಕಾಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡ ಬಸವರಾಜ, ಜವಳಗೇರಾ ಗ್ರಾಮ ಪಂಚಾಯತಿ ಅಧ್ಯಕ್ಷೆ ರೇಣುಕಮ್ಮ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೃಷಬೇಂದ್ರಯ್ಯ ಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಭಾರಿ ಉಪ ನಿರ್ದೇಶಕ ಸೋಮಶೇಖರ, ಲೋಕೋಪಯೋಗಿ ಉಪ ವಿಭಾಗದ ಸಹಾಯಕ ಅಭಿಯಂತರರಾದ ಸಿ.ಎಸ್.ಪೊಲೀಸ್‌ ಪಾಟೀಲ್‌,ಅನ್ನಪೂರ್ಣ ಬಿ.ಇ. ಸಿವಿಲ್, ಶಂಬುಲಿಂಗನಗೌಡ, ಚಂದ್ರಶೇಖರ ರಡ್ಡಿ, ಚಂದ್ರಶೇಖರ ಹಿರೇಮಠ,ಸೇರಿದಂತೆ ಇತರರು ಉಪಸ್ಥಿತರಿದ್ದರು..

ವರದಿ.ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend