ರಾಜ್ಯಸಭಾ ಫೈಟ್, ಬಿಜೆಪಿ2, ಕಾಂಗ್ರೆಸ್ 1ಜಯ,4ನೇ ಸ್ಟಾನಕ್ಕೆ ಹಣಾಹಣಿ…!!!

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ ಮತದಾನ ಶುಕ್ರವಾರ ನಡೆಯಲಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

 ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ (Rajyasabha Election) ಮತದಾನ ಇಂದು ನಡೆಯಲಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಒಟ್ಟು ನಾಲ್ಕು ಸ್ಥಾನಗಳ ಪೈಕಿ ಮೊದಲ ಮೂರು ಸ್ಥಾನಗಳ ಗೆಲುವು ಬಹುತೇಕ ನಿಶ್ಚಿತವಾಗಿವೆ. ಆದರೆ, ನಾಲ್ಕನೇ ಸ್ಥಾನಕ್ಕಾಗಿ ಮೂರೂ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಪೈಪೋಟಿ ನಡೆಸಿರುವುದರಿಂದ ಯಾರು ಗೆಲುವು ಸಾಧಿಸಲಿದ್ದಾರೆ ಎಂಬುದಕ್ಕೆ ಇಂದಿನ ಸಂಜೆವರೆಗೆ ಕಾಯಬೇಕಾಗಿದೆ.

ಬಿಜೆಪಿಗೆ ಎರಡು ಮತ್ತು ಕಾಂಗ್ರೆಸ್‌ಗೆ ಒಂದು ಸ್ಥಾನ ಖಚಿತವಾಗಿವೆ. ಬಿಜೆಪಿಯ ನಿರ್ಮಲಾ ಸೀತಾರಾಮನ್‌ (Nirmala Sitharaman) ಜಗ್ಗೇಶ್‌ (Jaggesh) ಹಾಗೂ ಕಾಂಗ್ರೆಸ್‌ನ ಜೈರಾಂ ರಮೇಶ್‌ ಅವರ ಗೆಲುವು ಹೆಚ್ಚೂ ಕಡಮೆ ನಿರ್ಧಾರವಾಗಿದೆ. ನಾಲ್ಕನೇ ಸ್ಥಾನಕ್ಕಾಗಿ ಬಿಜೆಪಿಯಿಂದ ಲೆಹರ್‌ ಸಿಂಗ್‌ ಸಿರೋಯ, ಕಾಂಗ್ರೆಸ್‌ನಿಂದ ಮನ್ಸೂರ್‌ ಅಲಿ ಖಾನ್‌ ಹಾಗೂ ಜೆಡಿಎಸ್‌ನಿಂದ ಕುಪೇಂದ್ರ ರೆಡ್ಡಿ ಸ್ಪರ್ಧಿಸಿದ್ದಾರೆ…

ವರದಿ. ಮುಕ್ಕಣ್ಣ ಹುಲಿಗುಡ್ಡ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend