ಸಿದ್ದಾಪುರ ಸ.ಹಿ.ಪ್ರಾ ಶಾಲೆ ಹಿಂಭಾಗದಲ್ಲಿರುವ ಸಾರ್ವಜನಿಕರ ರಸ್ತೆಯನ್ನು ದುರಸ್ತಿಗೊಳಿಸಿ
ಕೂಡ್ಲಿಗಿ ತಾಲೂಕು ಗುಂಡುಮುಣುಗು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ, ಸಿದ್ದಾಪುರ ಗ್ರಾಮದ ಸಹಿಪ್ರಾ ಶಾಲೆಯ ಹಿಂಭಾಗದಲ್ಲಿರುವ ಸಾರ್ವಜನಿಕರು ಹಾಗೂ ವಾಹನ ಗಳು ಓಡಾಡುವ ರಸ್ತೆಯನ್ನು ದುರಸ್ತಿಗೊಳಿಸಿ. ಸುಮಾರು ವರ್ಷಗಳಿಂದ ಈ ರಸ್ತೆಯನ್ನು ನಿರ್ಮಿಸಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಲ್ಲಿ ಸಿದ್ದಾಪುರ ಗ್ರಾಮಸ್ಥರಿಂದ ಮನವಿ ಮಾಡಲಾಗಿದ್ದು ಯಾವುದೇ ತರಹದ ಪ್ರಯೋಜನವಾಗಿಲ್ಲ. ಈ ರಸ್ತೆಯು ತಗ್ಗು ಗುಂಡಿಗಳಿಂದ ಬಿದ್ದಿದ್ದು. ಮಳೆಯ ನೀರು ಹಾಗೂ ಸಾರ್ವಜನಿಕರ ಬಚ್ಚಲು ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಸಾರ್ವಜನಿಕರಿಗೂ ಹಾಗೂ ವಾಹನಗಳ ಸಂಚಾರಕ್ಕೆ ತುಂಬಾ ತೊಂದರೆಯಾಗಿದೆ ಎಂದು ಸುಮಾರು ಬಾರಿ ಪತ್ರಿಕೆಯಲ್ಲಿ ಪ್ರಕಟ ಮಾಡಲಾಗಿದೆ, ಆದರೂ ಕೂಡ ಅಧಿಕಾರಿಗಳು ಈವರೆಗೂ ಈ ರಸ್ತೆಯನ್ನು ದುರಸ್ತಿಗೊಳಿಸಲು ಮುಂದಾಗುತ್ತಿಲ್ಲ.

ಸುಮಾರು ಜನರು ಈ ರಸ್ತೆಯಲ್ಲಿ ಬಿದ್ದು ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿರುವ ಉದಾಹರಣೆಗಳಿವೆ. ನಂತರ ಶಾಲೆಯ ಕಾಂಪೌಂಡ್ ಹಿಂಭಾಗದಲ್ಲಿ ಕಸದ ರಾಶಿಗಳು ಕೆಲವು ಜನರು ಹಾಕಿರುತ್ತಾರೆ. ಬೀಸುವ ಗಾಳಿಗೆ ಕಸ ದಾರಿಗೆ ಬಂದು ಕಣ್ಣಿಗೆ ಕಾಣದಂತೆ ಕೆಲವು ವಿಷ ಜಂತುಗಳು ದಾರಿಗೆ ಬರುತ್ತವೆ. ಈ ವಿಚಾರದ ಸಂಬಂಧ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೂ ಕೂಡ ತಿಳಿಸಲಾಗಿದೆ ಆದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ರೈತರಿಗೆ ಬಿತ್ತನೆ ಪ್ರಾರಂಭವಾಗಿರುವುದರಿಂದ ಸಾರ್ವಜನಿಕರು ಹಾಗೂ ರೈತರು ಬಿತ್ತನೆ ಕೆಲಸದಲ್ಲಿ ಮುಂದಾಗಿದ್ದಾರೆ. ಬಿತ್ತನೆ ಮುಗಿದ ತಕ್ಷಣ ಒಂದು ದಿನಾಂಕ ನಿಗದಿ ಮಾಡಿಕೊಂಡು ಜಿಲ್ಲಾ ಪಂಚಾಯಿತಿ ಮುಂದೆ ಧರಣಿ ಮಾಡಲಾಗುವುದೆಂದು ಸಿದ್ದಾಪುರ ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮಾಧ್ಯಮದ ಮೂಲಕ ಮನವಿ ಮಾಡಿದ್ದಾರೆ..
ವರದಿ.ಡಿ.ಎಂ. ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
