ಬಿಸಿಯೂಟದಲ್ಲಿ ಹುಳು ಸಾರ್ವಜನಿಕರ ಆಕ್ರೋಶ.
ಸಿಂಧನೂರು : ಜೂನ್ 20.ತಾಲೂಕಿನ ರೌಡಕುಂದಾ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಬಂಗಾರಿ ಕ್ಯಾಂಪಿನಲ್ಲಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿ ಊಟದಲ್ಲಿ ಹುಳುಗಳು ಕಾಣಿಸಿಕೊಂಡಿರುವ ಘಟನೆ ನಡೆದಿದೆ.

ಅಕ್ಷರ ದಾಸೋಹದ ಬಿಸಿಯೂಟ ಸೇವಿಸುತ್ತಿದ್ದ ಮಕ್ಕಳ ತಟ್ಟೆಯಲ್ಲಿ ಹುಳುಗಳು ಕಂಡು ಬಂದು ಮಕ್ಕಳ ಪಾಲಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬಂಗಾರಿ ಕ್ಯಾಂಪಿನ ಗ್ರಾಮದ ಉನ್ನತಿಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರವಿವಾರ ನಡೆದಿದೆ.ಶಾಲೆಯ ಮಕ್ಕಳಿಗೆ ಬಿಸಿಯೂಟದಲ್ಲಿ ಹುಳು ಹಿಡಿದ ದವಸಧಾನ್ಯಗಳನ್ನು ಬಳಸಿ ಅನ್ನ, ಸಾಂಬಾರು ತಯಾರಿಸಿ ಮಕ್ಕಳಿಗೆ ಬಡಿಸಿದ್ದಾರೆ. ಇದರಲ್ಲಿ ಬಾಲಹುಳು, ನುಸಿಹುಳುಗಳು ಕಂಡು ಬಂದಿವೆ. ಮಕ್ಕಳು ಕೂಡಲೇ ಪಾಲಕರಿಗೆ ತಿಳಿಸಿದ್ದಾರೆ. ಇದರಿಂದ ಪಾಲಕರು ಶಾಲೆಗೆ ಭೇಟಿ ನೀಡಿ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು ಖುದ್ದಾಗಿ ಊಟ ಮಾಡಿ ಪರಿಶೀಲನೆ ಮಾಡಿದ್ದಾರೆ
ಮಕ್ಕಳು ಎಲ್ಲರಿಗೂ ಮಕ್ಕಳೇ ಅವರ ಆರೋಗ್ಯ ಕಾಪಾಡಬೇಕಾದದ್ದು ಶಿಕ್ಷಕರ ಜವಾಬ್ದಾರಿ. ಈ ರೀತಿಯಾದಂತಹ ಉದಾಸೀನದ ಉತ್ತರವನ್ನು ನೀಡುತ್ತಾ ಅವರ ಜೀವದ ಜತೆ ಚೆಲ್ಲಾಟ ಆಡಬಾರದು. ಸಂಬಂಧಪಟ್ಟ ಬಿಇಓ,ಸಿಆರ್ ಸಿ ಗೆ ಪೋನ್ ಮಾಡಿದರೆ ರಿಸೀವ್ ಮಾಡುತ್ತಿಲ್ಲ, ಶಿಕ್ಷಣ ಸಚಿವರ ಗಮನಕ್ಕೂ ತರಲಾಗಿದೆ. ಆದಷ್ಟು ಬೇಗ ಅದಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ. ಅಧಿಕಾರಿಗಳು ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆ ಜರುಗದಂತೆ ಎಚ್ಚರವಹಿಸಬೇಕು ಎಂದು ಎಸ್ ಡಿ ಎಮ್ ಸಿ ಅಧ್ಯಕ್ಷ ವೀರರಾಜು ಪತ್ರಿಕೆ ಹೇಳಿಕೆ ನೀಡಿದರು…
ವರದಿ.ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
