ತೀವ್ರತರ ಅತಿಸಾರ ಬೇದಿ ಜಾಗೃತಿ ಡಾ.ನಾಗರಾಜ ಕಾಟ್ವಾ.
ಸಿಂಧನೂರ : ಅಗಸ್ಟ 2.ತೀರ್ವ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅತಿಸಾರ ಭೇದಿಯಿಂದ ಜೀವಕ್ಕೆ ಅಪಾಯ ಇದ್ದು ,ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ನಾಗರಾಜ ಕಾಟ್ವಾ ಹೇಳಿದರು.
ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಅತಿಸಾರ ಭೇದಿ ಬಗ್ಗೆ ಯಾರು ನಿರ್ಲಕ್ಷ್ಯ ಮಾಡಬೇಡಿ ನಿರ್ಲಕ್ಷ್ಯ ಮಾಡಿದರೆ ಅಪಾಯ ಗ್ಯಾರಂಟಿ ಎಂದರು.
ದಿ.ಅಗಸ್ಟ್ 1ರಿಂದ 15 ರವರೆಗೆ ಅತಿಸಾರದ ಬಗ್ಗೆ ಆಸ್ಪತ್ರೆಯಲ್ಲಿ ಹಾಗೂ ಮನೆಮನೆಗೆ ಹೋಗಿ ಇದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಸಾರ್ವಜನಿಕರು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜೊತೆಗೆ ಕೈಗೊಡಿಸಬೇಕು ಎಂದು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಅಯ್ಯನಗೌಡ, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ ಶಶಿಧರ. ರಂಗನಾಥ ಗುಡಿ ಸಂಗನಗೌಡ ಗೀತಾ, ಅಮ್ರತಮ್ಮ,ಸತ್ಯ ರಾಣಿ ಸೀಮಾ, ಲಯನ್ಸ್ ಕ್ಲಬ ಅಧ್ಯಕ್ಷ ರಾದ ಸತ್ಯ ಪದಾಧಿಕಾರಿಗಳಾದ ರಾಮಕೃಷ್ಣ ವಿರೇಶ ಮೋಹನ ಲಾಲಚಂದ ಮಾವೀರಚಂದ ಪ್ರಬಾಕರ ಕುಲಕರ್ಣಿ ಸೇರಿದಂತೆ ಇತರರಿದ್ದರು..

ವರದಿ.ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
