ಇಂದು ಜುಮ್ಮೋಬನಹಳ್ಳಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಜುಮ್ಮೋಬನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಸ್ವಾತಂತ್ರ ಅಮೃತ ಮಹೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಗುರುಗಳು ಹಾಗೂ ಎಸ್ ಟಿ ಎಂ ಸಿ ಅಧ್ಯಕ್ಷರು ಸೇರಿ ಧ್ವಜ ಹಾರಿಸಲಾಯಿತು ಹಾಗೂ ವಿದ್ಯಾರ್ಥಿಗಳಿಂದ ಭಾಷಣ ಮತ್ತು ಸಂಗೀತ ಡ್ಯಾನ್ಸ್ ಕೋಲಾಟದ ಮುಖಾಂತರ 75ನೇ ಅಮೃತ ಮಹೋತ್ಸವವನ್ನು ಸಡಗರದಿಂದ ಹಬ್ಬದ ರೀತಿ ಆಚರಿಸಿದರು.

ಈ ವೇಳೆ ಶಾಲೆಯ ಎಲ್ಲಾ ಶಿಕ್ಷಕರು ಎಲ್ಲಾ ವಿದ್ಯಾರ್ಥಿಗಳು ಹಾಗೂ ಹಳೆಯ ವಿದ್ಯಾರ್ಥಿಗಳು ತಾಲೂಕು ಪಂಚಾಯಿತಿ ಸದಸ್ಯರು ಎಸ್ ಟಿ ಎಂ ಸಿ ಅಧ್ಯಕ್ಷರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರುಗಳು ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಪತ್ರಿಕ ಮಾಧ್ಯಮದವರು ಇದ್ದರು :
ವರದಿ ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
