;

ಚಿಕ್ಕ ಜೋಗಿಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ…!!!

ಚಿಕ್ಕ ಜೋಗಿಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಚಿಕ್ಕಜೋಗಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಾಗಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕರು ರವೀಂದ್ರನಾಥ್ ಬಾಬು ವಹಿಸಿದ್ದರು. ಪ್ರತಿಭಾ ಕಾರಂಜಿ ಕಾರ್ಯಕ್ರಮವು ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಂದ ಸಂಗೀತ ಮತ್ತು ಜನಪದ ನೃತ್ಯ, ಕೋಲಾಟ, ಚಿತ್ರಕಲೆಗಳು ಹಾಗೂ ಇನ್ನಿತರೆ ಆಟದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಅಧಿಕಾರಿ ಜಗದೀಶ್, ಬಾಲಕಿಯರ ಪ್ರೌಢಶಾಲೆ ಮುಖ್ಯ ಗುರುಗಳು ನಾಗಭೂಷಣ್, ಪಿಡಿಒ ನಾರಾಯಣಸ್ವಾಮಿ, ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ದೀಪ, ಗೋಣಿಬಸಪ್ಪ ಬೋರೆಯ್ಯ ಸಿ ಆರ್ ಪಿ ಶ್ರೀನಿವಾಸ್ ಸಿಆರ್ಪಿ ಮುಖ್ಯ ಗುರುಗಳು ಬಸವರಾಜ್ ಸೇರಿದಂತೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಸರ್ವ ಸದಸ್ಯರು, ಶಿಕ್ಷಕರು, ಎಲ್ಲಾ ವಿದ್ಯಾರ್ಥಿಗಳ ಪೋಷಕರು ಹಾಗೂ ಊರಿನ ಯುವಕರು ಶಾಲೆಯ ಹಳೆಯ ವಿದ್ಯಾರ್ಥಿಗಳು, ಊರಿನ ಗ್ರಾಮಸ್ಥರು ಇದ್ದರು.

ವರದಿ: ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;