;

ಹೊಳಲ್ಕೆರೆ ತಾಲೋಕು ಮಟ್ಟದ ಪದವಿ ಪೂರ್ವ ಕಾಲೇಜ್ ಮಟ್ಟದ ಕ್ರೀಡಾಕೂಟಕ್ಕೆ ಶಾಸಕ, ಎಂ, ಚಂದ್ರಪ್ಪ ಚಾಲನೆ…!!!

ಹೊಳಲ್ಕೆರೆಯ ಕೊಟ್ರೆ ನಂಜಪ್ಪ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಗುರುವಾರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ 2022-23ರ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು, ಶಾಸಕ ಎಂ ಚಂದ್ರಪ್ಪ ಮಕ್ಕಳೊಟ್ಟಿಗೆ ಸೇರಿ ಕ್ರೀಡಾ ಜ್ಯೋತಿ ಬೆಳಗುವ ಮೂಲಕ ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು.

ಇದೇ ವೇಳೆ ಮಾತನಾಡಿದ ಶಾಸಕರು ವಿದ್ಯಾಭ್ಯಾಸದ ಜೊತೆಗೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಆಟೋಟ, ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದು ಅತ್ಯವಶ್ಯಕ. ಸೋಲು ಗೆಲುವನ್ನು ಸಮಾನಾಗಿ ಸ್ವೀಕರಿಸಿ ಕ್ರೀಡೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ದೈಹಿಕ ಹಾಗು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂಬ ಸಂದೇಶವನ್ನು ಮಕ್ಕಳಿಗೆ ನೀಡಿದರು.
ಇನ್ನು ನಮ್ಮ ಗ್ರಾಮೀಣ ಮಕ್ಕಳ ಪ್ರತಿಭೆಗಳು ರಾಷ್ಟ್ರ ಮಟ್ಟದಲ್ಲಿ ಮಿಂಚಬೇಕು ಎಂಬ ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಉಪಾಧ್ಯಕ್ಷರಾದ ಶ್ರೀ ಕೆ.ಸಿ.ರಮೇಶ್, ಚಿತ್ರದುರ್ಗ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀ ಎನ್. ರಾಜು, ಶ್ರೀ ಪಿ.ಹೆಚ್.ಮುರುಗೇಶ್, ಹೊಳಲ್ಕೆರೆ ತಾಲ್ಲೂಕಿನ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಗಳು, ಕ್ರೀಡಾಪಟುಗಳು, ವಿದ್ಯಾರ್ಥಿಗಳು ಮತ್ತು ಕ್ರೀಡಾ ಪ್ರೇಮಿಗಳು ಪಾಲ್ಗೊಂಡಿದ್ದರು…

ವರದಿ. ಸುರೇಶ್. ಚಿತ್ರದುರ್ಗ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;