ಪ್ರತಿಯೊಬ್ಬರಲ್ಲಿ ಸಾಕ್ಷರತೆಯ ಅರಿವು ಮೂಡಿಸಬೇಕು.. ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣ ಬಹುಮುಖ್ಯ ಸರ್ಕಾರವು ಜನರಿಗಾಗಿ ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ. ಎಲ್ಲಾ ಯೋಜನೆಗಳು ಜನರಿಗೆ ತಲುಪಿಸಬೇಕಾದರೆ ಶಿಕ್ಷಣದ ಅರಿವು ಇರಬೇಕಾಗುತ್ತದೆ. ಆಗ ಪ್ರತಿಯೊಬ್ಬರು ಸರ್ಕಾರದ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಕಲಬುರ್ಗಿ ಜಿಲ್ಲಾ ಲೋಕ ಶಿಕ್ಷಣ ಸಮಿತಿ ಕಾರ್ಯಾಧ್ಯಕ್ಷ ಯಶವಂತ್ ವಿ ಗುರುಕರ್ ಹೇಳಿದರು. ಕಲಬುರ್ಗಿ ನಗರದ ಕಲಬುರಗಿ ಸರಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಲೋಕ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಕಲಬುರ್ಗಿ, ಜಿಲ್ಲಾ/ ತಾಲೂಕು ಲೋಕ ಶಿಕ್ಷಣ ಸಮಿತಿ, ಕಲಬುರಗಿ ಮಹಾನಗರ ಪಾಲಿಕೆ, ಕಲಬುರ್ಗಿ ಹಾಗೂ ಸರ್ಕಾರಿ ಶಿಕ್ಷಕರ ಮಹಾವಿದ್ಯಾಲಯ ಕಲಬುರ್ಗಿ ಇವರ ಸಂಯುಕ್ತ ಆಶ್ರಯದಲ್ಲಿ 56ನೇ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ/ ಸಪ್ತಾಹ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು..

ವರದಿ. ಬಸಯ್ಯ ಹಿರೇಮಠ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
