ಭೂತಲದಿನ್ನಿಯಲ್ಲಿ ಹಾರಾಪೂರು ವಲಯ ಮಟ್ಟದ ಪೋಷಣಾ ಮಾಸಾಚರಣೆ.
ಸಿಂಧನೂರು:ಸ.17.ರಾಜ್ಯದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರನ್ನು ಆರೋಗ್ಯವಂತರನ್ನಾಗಿ ರೂಪಿಸುವ ಸಲುವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯು ಪೋಷಣೆ ಮಾಸಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸುನೀತಾ ಹಿರಿಯ ಮೇಲ್ವಿಚಾರಕರು ತಿಳಿಸಿದರು.
ಹಾರಾಪೂರು ಬಿ.ಆರ್.ಸಿ ವಲಯ ಮಟ್ಟದ ಕುನ್ನಟಗಿ ಹೋಬಳಿಯ ಭೂತಲದಿನ್ನಿ ಗ್ರಾಮ ಪಂಚಾಯತ್ ನ ಭೂತಲದಿನ್ನಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಪೋಷಣಾ ಅಭಿಯಾನ, ಸುಕನ್ಯಾ ಸಮೃದ್ಧಿ ಪಾಸ್ ಬುಕ್ ವಿತರಣೆ, ಅನ್ನಪ್ರಾಸನ, ಪ್ರಧಾನ ಮಂತ್ರಿ ವಂದನ ಸಂಪ್ತಾಹ ಕಾರ್ಯಕ್ರಮದಲ್ಲಿ ಗ್ರಾಮಗಳ ಗರ್ಭಿಣಿಯರಿಗೆ ಸೀಮಂತ ಮಾಡಿ ಅವರು ಮಾತನಾಡಿದರು.
ಭಾರತ ಸರ್ಕಾರ ಪ್ರಧಾನಿ ಮಂತ್ರಿಯವರು 2018 ಮಾರ್ಚ್ 8ರಂದು ಮಹಿಳಾ ದಿನಾಚರಣೆ ದಿನದಂದು ಪೋಷಣ ಅಭಿಯಾನವನ್ನು ಅನುಷಾನಗೊಳಿಸಿದರು. ಅಪೌಷ್ಟಿಕತೆಯನ್ನು ಹೋಗಲಾಡಿಸಲು ಅಂಗನವಾಡಿಗಳಲ್ಲಿ ದೊರೆಯುವ ಆಹಾರ ಪದಾರ್ಥಗಳು, ಮೊಟ್ಟೆ, ಕಾಳು, ರಾಗಿ, ಕಾಯಿಪಲ್ಲೆ ಸೇರಿದಂತೆ ಇನ್ನೂ ಅನೇಕ ಪೌಷ್ಟಿಕತೆ ಆಹಾರ ಪದಾರ್ಥಗಳನ್ನು ಸೇವಿಸುವದರಿಂದ ಅಪೌಷ್ಟಿಕತೆಯನ್ನು ಹೋಗಲಾಡಿಸಬಹುದು ಎಂದು ಡಾ.ಬಸವರಾಜ ಪಿ.ಎಚ್.ಸಿ ಹಾರಪುರ ತಿಳಿಸಿದರು.
ನಂತರ ಮಾತನಾಡಿದ ಹಿರಿಯ ಮೇಲ್ವಿಚಾರಕಿ ಲಕ್ಷ್ಮೀಬಾಯಿ ಗರ್ಭಿಣಿಯರು, ಬಾಣಂತಿಯರು, ಶಿಶುವಿನ ಬೆಳವಣಿಗೆ ಕುಂಠಿತ, ತೂಕ ಕೊರತೆ, ರಕ್ತಹೀನತೆ, ಅಪೌಷ್ಟಿಕತೆ, ಕಡಿಮೆ ತೂಕದ ಶಿಶು ಸೇರಿದಂತೆ ಅಪೌಷ್ಟಿಕತೆ ಸಮಸ್ಯೆಯಿಂದ ಬಳಲುತ್ತಿರುವವರನ್ನು ಅದರಿಂದ ಹೊರಕ್ಕೆ ತರಲು ಪೂರಕವಾಗಿ ಇಲಾಖೆಯು ನಾನಾ ಯೋಜನೆಯನ್ನು ಜಾರಿಗೊಳಿಸಿದೆ. ಹಂತ ಹಂತವಾಗಿ ಅಪೌಷ್ಟಿಕತೆ ಮುಕ್ತ ಕರ್ನಾಟಕ ರೂಪಿಸಲು ಉದ್ದೇಶಿಸಿಲಾಗಿದೆ. ಗರ್ಭಿಣಿಯರು, ಬಾಣಂತಿಯರಲ್ಲಿ ಪೌಷ್ಟಿಕಾಂಶ ಮಟ್ಟ ವೃದ್ಧಿಗಾಗಿ ಮಾತೃಪೂರ್ಣ,ಸೃಷ್ಟಿ ಹಾಗೂ ಕ್ಷೀರಭಾಗ್ಯ ಯೋಜನೆ ಯನ್ನೂ ಜಾರಿಗೊಳಿಸಿದ್ದು ಈ ಯೋಜನೆಗಳನ್ನು ಸದುಪಯೋಗಪಡಿಸಿ ಕೊಳ್ಳಬೇಕು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಮಹಾದೇವಿ ಮಾತನಾಡಿ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿಸಮಾಲೋಚನೆ, ಪೋಷಣೆಯ ಸಾಕ್ಷರತೆ, ಪ್ರಾಯ ಪೂರ್ವ ಬಾಲಕಿಯರು ಹಾಗೂ ಗರ್ಭಿಣಿಯರಲ್ಲಿ ರಕ್ತಹೀನತೆಯನ್ನು ಗುರುತಿಸಿ ನಿವಾರಿಸುವ ಕಾರ್ಯದಲ್ಲಿ ಇಲಾಖೆ ತೊಡಗಿಸಿಕೊಂಡಿದೆ. ಮಹಿಳೆಯರು ಉತ್ತಮ ವಿಟಮಿನ್‌ಗಳಿರುವ ಆಹಾರ ಪದಾರ್ಥಗಳನ್ನು ಮನೆಯಲ್ಲಿಯೇ ತಯಾರಿಸಿ ಉಪಯೋಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಿ ಎಂದರು.
ವಿಶ್ವನಾಥ ಪೋಷಣಾ ಅಭಿಯಾನ ಸಂಯೋಜಕರು ಮಾತನಾಡಿ, ‘ಖನಿಜಾಂಶ ಹೊಂದಿರುವ ಸೊಪ್ಪು, ತರಕಾರಿ ಜತೆ ಮೊಳಕೆ ಕಾಳು ಉಪಯೋಗಿಸುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕು. ತಾಯಿ ಆರೋಗ್ಯವಾಗಿದ್ದಾಗ ಮಾತ್ರ ಆರೋಗ್ಯ ವಂತ ಶಿಶುವಿಗೆ ಜನ್ಮ ನೀಡಲು ಸಾಧ್ಯವಾಗುತ್ತದೆ.ಈ ಪೋಷಣ ಅಭಿಯಾನವು ಮಗು ಹುಟ್ಟಿನಿಂದ 6 ವರ್ಷದ ಮಗುವಿನವರೆಗೆ ಇಲಾಖೆ ವತಿಯಿಂದ ಗರ್ಭಿಣಿ ಸ್ತ್ರೀಯರ ಮತ್ತು ಮಗುವಿನ ಅಪೌಷ್ಟಿಕತೆ ಯನ್ನು ಕಡಿಮೆ ಮಾಡುವ ಮುಖ್ಯ ಉದ್ದೇಶದಿಂದ ಸಮತೋಲನ ಆಹಾರವನ್ನು ಅಂಗನವಾಡಿಗಳಲ್ಲಿ ನೀಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಶ್ರೀನಿವಾಸ್ ಗ್ರಾ ಪಂ,ಅಧ್ಯಕ್ಷರು, ಬಸಮ್ಮ ಗ್ರಾ.ಪಂ. ಉಪಾಧ್ಯಕ್ಷರು, ಸದ್ಯಸರಾದ ಮಹೇಶ್ವರಿ, ಮೌಲಾಬಿ ,ನಾಗನಗೌಡ,ಮಲ್ಲಿಕಾರ್ಜುನ, ದೊಡ್ಡಲಿಂಗಪ್ಪ ಪಿಡಿಓ, ರಂಜಾನ್ ಬಿ,ದೀಪಿಕಾ, ನಬೀನಾ,ಸೈಯದ್ ಬಿ, ಹಾರಾಪೂರು ಹೋಬಳಿ ಮಟ್ಟದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಅರೋಗ್ಯ ಸಹಾಯಕಿಯರು ಸೇರಿದಂತೆ ಇತರರು ಇದ್ದರು..

ವರದಿ. ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
