ಸೆ.೧೭ರಂದು ಮೋದಿ ಹುಟ್ಟುಹಬ್ಬದ ಆಚರಣೆಗೆ ರಕ್ತದಾನ ಶಿಬಿರ;
ಸ್ವಯಂಪ್ರೇರಿತ ರಕ್ತದಾನಕ್ಕಾಗಿ ಮೆಗಾ ಅಭಿಯಾನ
ನರೇಂದ್ರ ಮೋದಿ
ಕೂಡ್ಲಿಗಿ: ಆರೋಗ್ಯವಂತ ಯುವ ಸಮುದಾಯವು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆಯಿಂದ ಬಳಲುವ ಅಮೂಲ್ಯ ಜೀವ ಉಳಿಸಲು ಮುಂದಾಗಬೇಕು’ ತಾಲೂಕು ಯುವ ಮೋರ್ಚ ಅಧ್ಯಕ್ಷ ಬಿ.ಗುಳಿಗಿ ವಿರೇಶ ಹೇಳಿದರು.
ಅವರು ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷದ ಯುವ ಮೋರ್ಚ ಕೂಡ್ಲಿಗಿ ಮಂಡಲದ ವತಿಯಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿಸೆಪ್ಟೆಂಬರ್ ೧೭ ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಯುವ ಮೋರ್ಚ ಅಧ್ಯಕ್ಷರಾದ ಬಿ. ಗುಳಿಗೆ ವಿರೇಶ ಮಾತನಾಡಿ
‘ರಕ್ತದಾನದಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂಬ ತಪ್ಪು ಕಲ್ಪನೆ ಸಮಾಜದಲ್ಲಿ ಬೇರೂರಿದೆ. ಇದನ್ನು ತೊಲಗಿಸಬೇಕಿದೆ. ಆದ್ದರಿಂದ ಆರೋಗ್ಯವಂತ ವ್ಯಕ್ತಿಗಳು ರಕ್ತದಾನಕ್ಕೆ ಮುಂದಾಗಿ ಮತ್ತೊಬ್ಬರಿಗೆ ಮಾದರಿಯಾಗಬೇಕು. ಯುವಕರು ರಕ್ತದಾನದ ಕುರಿತು ಇರುವ ಮೌಢ್ಯವನ್ನು ದೂರ ಮಾಡಬೇಕು’ ಎಂದು ತಿಳಿಸಿದರು.
ಸಚಿನ್ ಪ.ಪಂ ಸದಸ್ಯ ಮಾತನಾಡಿ ‘ರಕ್ತದಾನದಿಂದ ರಕ್ತದ ಅವಶ್ಯಕತೆ ಇರುವವರಿಗೆ ಮಾತ್ರ ಲಾಭವಾಗುವುದಿಲ್ಲ. ರಕ್ತದಾನಿಗಳೂ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳಬಹುದು. ಇದರಿಂದ ರಕ್ತದಾನ ಮಾಡಿದವರಲ್ಲಿ ಹೊಸ ರಕ್ತಕಣಗಳು ಉತ್ಪತ್ತಿಯಾಗುತ್ತವೆ. ಜತೆಗೆ ಹೃದಯಾಘಾತದ ಸಂಭವ, ರಕ್ತದಲ್ಲಿ ಕೊಬ್ಬಿನ ಅಂಶ ಕಡಿಮೆಯಾಗುತ್ತದೆ. ಆದ್ದರಿಂದ ರಕ್ತದಾನ ಮಾಡಲು ಹಿಂಜರಿಯಬಾರದು. ಈ ಬಗ್ಗೆ ಯುವಕರು ಜನರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.
ತಾಲೂಕು ವೈದ್ಯಾಧಿಕಾರಿ ಡಾ.ಪ್ರದೀಪ, ಮಾತನಾಡಿ ‘ಒಬ್ಬ ದಾನಿಯಿಂದ ಪಡೆದ ರಕ್ತವನ್ನು ಕೇವಲ ೩೫ ದಿನ ಮಾತ್ರ ಉಪಯೋಗಿಸಲು ಸಾಧ್ಯ ಮತ್ತು ಅದನ್ನು ಅದೇ ರಕ್ತದ ಗುಂಪಿನ ಮತ್ತೊಬ್ಬ ವ್ಯಕ್ತಿಗೆ ಮಾತ್ರ ಉಪಯೋಗಿಸಬಹುದು. ದಾನ ಮಾಡಿದ ವ್ಯಕ್ತಿಯಲ್ಲಿ ಶುದ್ಧ ರಕ್ತ ಮತ್ತೆ ೩ ತಿಂಗಳಲ್ಲಿ ಪುನ: ಉತ್ಪತ್ತಿಯಾಗುತ್ತದೆ. ದಾನಿಯ ಆರೋಗ್ಯದಲ್ಲಿ ಯಾವುದೇ ತೊಂದರೆ ಉಂಟಾಗದು’ ಎಂದರು. ತಾಲ್ಲೂಕು ವೈದ್ಯಾಧಿಕಾರಿ ಡಾ. ವಿನಯ್ ಮಾತನಾಡಿದರು
ಈ ಸಂದರ್ಭದಲ್ಲಿ ಪ.ಪಂ ಅಧ್ಯಕ್ಷೆ ಶಾರದಬಾಯಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರ್ಯಪಾಪಣ್ಣ, ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚ್ ಕಾರ್ಯದರ್ಶಿ ಎಸ್ ದುರುಗೇಶ, ಮುಂಖಡರಾದ ಟಿ.ಜಿ ಮಲ್ಲಿಕಾರ್ಜುಗೌಡ್ರು, ಭೀಮಣ್ಣ, ಮಂಜುನಾಥ ಮಂಡಲ ಅಧ್ಯಕ್ಷ ಚೆನ್ನಪ್ಪ, ಲಕ್ಷಿಬಾಯಿ ಕಾಂತರಾಜ್, ಅಜೇಯ, ರಮೇಶ ಕೆಕೆಹಟ್ಟಿ, ಉಪಸ್ಥಿತರಿದ್ದರು…
ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

