ಪ್ರಥಮಂ ಶೈಲ ಪುತ್ರಿ*
🔱
*ವಂದೇ ವಾಂಛಿತಲಾಭಾಯ ಚಂದ್ರಾರ್ಧಕೃತಶೇಖರಾಂ* |
*ವೃಷಾರೂಢಾಂ ಶೂಲಧರಾಂ ಶೈಲಪುತ್ರೀಂ ಯಶಸ್ವಿನೀಂ* ||
ನವರಾತ್ರಿಯ ಮೊದಲನೇ ದಿನವನ್ನು ಪ್ರತಿಪಾದ ಎಂದು ಕರೆಯುತ್ತಾರೆ.ಈ ದಿನ ಶೈಲಪುತ್ರಿಯ ರೂಪವನ್ನು ಪೂಜಿಸಲಾಗುತ್ತದೆ. ಶೈಲಪುತ್ರಿಯೆಂದರೆ ಪರ್ವತರಾಜನ ಮಗಳು ಎಂದರ್ಥ, ಈಶ್ವರನ ಪತ್ನಿಯಾಗಿಯೂ ಶೈಲ ಪುತ್ರಿಯನ್ನು ಆರಾಧಿಸಲಾಗುತ್ತದೆ.
ಶೈಲಪುತ್ರಿಯನ್ನು ಸತಿ ದೇವಿಯ ಪುನರ್ಜನ್ಮವೆಂದು ಕರೆಯಲಾಗುತ್ತದೆ. ಪತಿಯಾದ ಶಿವನನ್ನು ತಂದೆಯು ಅವಮಾನ ಮಾಡಿದ್ದಕ್ಕಾಗಿ ಸತಿ ದೇವಿಯು ತನ್ನ ತಂದೆ ಯಜ್ಞ ಮಾಡುತ್ತಿದ್ದ ವೇಳೆ ಅಗ್ನಿಕುಂಡಕ್ಕೆ ಜಿಗಿದು ಪ್ರಾಣಾರ್ಪಣೆಗೈಯುತ್ತಾಳೆ. ಶಿವನನ್ನು ಮರಳಿ ಪಡೆಯಲು ಅವಳು ಪುನರ್ಜನ್ಮ ಪಡೆಯುತ್ತಾಳೆ. ಆದರೆ ಸತಿ ಸಾವಿನ ಬಳಿಕ ಶಿವನು ದೀರ್ಘವಾದ ಧ್ಯಾನದಲ್ಲಿ ಮುಳುಗಿ ಹೋದ. ದೇವಿ ಶೈಲ ಪುತ್ರಿಯು ಕಾಡಿಗೆ ಹೋಗಿ 16ವರ್ಷ ಕಠಿಣ ತಪಸ್ಸಿನಲ್ಲಿ ತೊಡಗಿ ನಂತರ ಶಿವನನ್ನು ಪಡೆದಳು.

🔱🌺 *ತಾಯಿ ಶೈಲಪುತ್ರಿ ರೂಪದಿಂದ ಮಂಗಲವನ್ನೇ ಅನುಗ್ರಹಿಸಲಿ* 🔱🌺
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
