ಜನಸಾಮಾನ್ಯರ ಸಂಕಷ್ಟ ಅರಿಯಲು ರಾಹುಲ್ ಭಾರತ್ ಜೋಡೋ ಯಾತ್ರೆ.
ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಭರಮಸಾಗರದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯನ್ನು ಎಐಸಿಸಿ ಕಾರ್ಯದರ್ಶಿ ಶ್ರೀ ಮಯೂರ ಜಯಕುಮಾರ ಹಾಗೂ ಕೆಪಿಸಿಸಿ ಉಪಾಧ್ಯಕ್ಷ,ಮಾಜಿ ಸಚಿವ ಶ್ರೀ ಹೆಚ್.ಆಂಜನೇಯ ಉದ್ಘಾಟಿಸಿ ಮಾತನಾಡಿದರು.
ದೇಶದ ಜನರ ಧ್ವನಿಯಾಗಲು ಯುವ ನೇತಾರ ಶ್ರೀ.ರಾಹುಲ್ ಗಾಂಧಿ ಅವರು ಕಟಿಬದ್ಧರಾಗಿದ್ದಾರೆ. ಬೆಲೆಏರಿಕೆ, ನಿರುದ್ಯೋಗ, ರೈತರ ಸಂಕಷ್ಟ ಮೊದಲಾದ ಸಮಸ್ಯೆಗಳ ವಿರುದ್ಧ ಅವರು ಈ ಐತಿಹಾಸಿಕ ಯಾತ್ರೆಯ ಮೂಲಕ ಧ್ವನಿ ಎತ್ತುತ್ತಿದ್ದಾರೆ.
ಯಾತ್ರೆಯು ಚಿತ್ರದುರ್ಗದ ಹಿರಿಯೂರು,ಚಳ್ಳಕೆರೆ,ಮೊಳಕಾಲ್ಮುರು ಮಾರ್ಗವಾಗಿ ಸಂಚರಿಸಲಿದೆ. ರಾಹುಲ್ ಗಾಂಧಿ ಅವರು ತಮಗೆ ಇದೇ ಮಾರ್ಗಬೇಕು ಎಂದು ಆಯ್ಕೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ನಾಯಕರು ಪ್ರತೀ ಮನೆ ಮನೆಗೆ ಹೋಗಿ ಜಾಗೃತಿ ಮೂಡಿಸಬೇಕು. ವಿಶೇಷವಾಗಿ ನಿರುದ್ಯೋಗಿ ಯುವಕರು, ಮಹಿಳೆಯರನ್ನು ರಾಹುಲ್ ಗಾಂಧಿ ಅವರು ಯಾತ್ರೆ ವೇಳೆ ಭೇಟಿ ಮಾಡಲು ಉದ್ದೇಶಿಸಿದ್ದಾರೆ.
ಎಲ್ಲ ನಾಯಕರು ಪ್ರತೀ ಗ್ರಾಪಂ.ಗಳಲ್ಲೂ ಸಭೆ ನಡೆಸಬೇಕು. ರಾಜ್ಯದಲ್ಲಿ ನಡೆಯಲಿರುವ ಈ ಯಾತ್ರೆಯನ್ನು ದೇಶಕ್ಕೆ ಮಾದರಿಯನ್ನಾಗಿಸಬೇಕು ಎಂದು ಆಂಜನೇಯ ಅವರು ಮನವಿ ಮಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಕ್ಷೇತ್ರ ಉಸ್ತುವಾರಿ ಡಾ.ಸಾಸಲು ಸತೀಶ್, ಡಿಸಿಸಿ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಕೆ.ಪಿ.ಸಿಸಿ ಸದಸ್ಯ ಎಸ್.ಎಂ.ಎಲ್ ತಿಪ್ಪೇಸ್ವಾಮಿ,ಅಸಂಘಟಿತ ಕಾರ್ಮಿಕರ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್, ಭರಮಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದುರ್ಗೇಶ್ ಪೂಜಾರ್, ಜಿ.ಪಂ.ಮಾಜಿ ಸದಸ್ಯ ಕೃಷ್ಣಮೂರ್ತಿ, ಜಿ.ಪಂ.ಮಾಜಿ. ಉಪಾಧ್ಯಕ್ಷ ಗಂಗಾಧರ್.ಬಿ, ಕಾಂಗ್ರೆಸ್ ಮುಖಂಡ ಕಾಟಿಹಳ್ಳಿ ಶಿವಕುಮಾರ್ ಸೇರಿದಂತೆ ಹಾಲಿ-ಮಾಜಿ ಜನಪ್ರತಿನಿಧಿಗಳು, ಪಕ್ಷದ ವಿವಿಧ ತಾಲೂಕು ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು,ಕಾರ್ಯಕರ್ತರು ಉಪಸ್ಥಿತರಿದ್ದರು…

ವರದಿ. ಸುರೇಶ್ ಹೊಳಲ್ಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
