ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಲೋಕಾರ್ಪಣೆ
ಭೂಒತ್ತುವರಿ ಪ್ರಕರಣದಲ್ಲಿ ರೈತರ ವಿರುದ್ಧ ಕೇಸು ಹಾಕುವಂತಿಲ್ಲ: ಆರ್.ಆಶೋಕ್
ಹೊಸಪೇಟೆ: ಭೂ ಒತ್ತುವರಿ ಪ್ರಕರಣದಲ್ಲಿ ಕಂದಾಯ ಭೂಮಿಯಲ್ಲಿ ವ್ಯವಸಾಯ ಮಾಡುವಂತಹ ರೈತರ ವಿರುದ್ದ ಕೇಸು ಹಾಕದಂತೆ ತಿದ್ದುಪಡಿ ತರಲಾಗಿದೆ ಎಂದು ಕಂದಾಯ ಸಚಿವ ಆರ್.ಆಶೋಕ್ ಅವರು ಹೇಳಿದರು.

ಸೋಮವಾರದಂದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಲೋಕಾರ್ಪಣೆ ಅಂಗವಾಗಿ ಮಿನಿ ವಿಧಾನಸೌಧ ಕಟ್ಟಡವನ್ನು ಉದ್ಘಾಟಣೆ ಮಾಡಿ ನಂತರ ಚಂದ್ರಶೇಖರ ಅಜಾದ್ ರಂಗಮಂದಿರದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದೇ ಸಂದರ್ಭದಲ್ಲಿ 1.40 ಕೋಟಿ ವೆಚ್ಚದಲ್ಲಿ ಶೈಕ್ಷಣಿಕ ಚಟುವಟಿಕೆ ಕೇಂದ್ರ ಕಟ್ಟಡಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದರು.
ಬಗರ್ಹುಕುಂ ಕಂದಾಯ ಜಮೀನಿನಲ್ಲಿ ಸಾಗುವಳಿ ಮಾಡುವಂತಹ ರೈತರು ಫಾರಂ ನಂ-54 ನಲ್ಲಿ ಅರ್ಜಿ ಸಲ್ಲಿಸಿದಂತಹ ರೈತರಿಗೆ ಅವರ ಹೆಸರಿನಲ್ಲಿ ಪಟ್ಟ ನೀಡಲಾಗುವುದು. ಫಾರಂ ನಂ.54 ನ್ನು ಸಲ್ಲಿಸಲು ರೈತರಿಗೆ ಒಂದು ವರ್ಷ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಅವರು ಹೇಳಿದರು.

ಪಿಂಚಣಿ ಫಲಾನುಭವಿಗಳು ಟ್ರೋಲ್ಫ್ರೀ ಸಂಖ್ಯೆಗೆ ಕರೆ ಮಾಡಿ ಮನವಿ ಸಲ್ಲಿಸಿದರೆ 72 ಗಂಟೆಗಳಲ್ಲಿ ಮನೆಬಾಗಿಲಿಗೆ ಬಂದು ಯಾವುದೇ ಅರ್ಜಿಯನ್ನು ಪಡೆಯದೇ ಆನ್ಲೈನ್ ಮೂಲಕ ಪಿಂಚಣಿ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಹೇಳಿದ ಕಂದಾಯ ಸಚಿವರು ಹಟ್ಟಿಗಳಲ್ಲಿ ವಾಸಿಸುತ್ತಿರುವ ಜನರನ್ನು ಗುರುತಿಸಿ ಅವರಿಗೆ ಪಟ್ಟಗಳನ್ನು ಮಾಡಿಕೊಟ್ಟು ಅವರು ವಾಸಿಸುತ್ತಿರುವ ಹಟ್ಟಿಯನ್ನು ಗ್ರಾಮಗಳನ್ನಾಗಿ ಘೋಷಿಸಿ ಎಂದು ಜಿಲ್ಲಾಧಿಕಾರಿಗೆ ಅವರು ಈ ಸಂದರ್ಭದಲ್ಲಿ ಸೂಚಿಸಿದರು.
ಕೂಡ್ಲಿಗಿ ತಾಲೂಕಿನಲ್ಲಿ ಸರ್ವೆ ನಂ.480ರ 10ಎಕರೆ ಜಮೀನನ್ನು ಬಡಜನರ ವಸತಿಗಾಗಿ ಮಂಜೂರು ಮಾಡಲಾಗಿದೆ. ಸ್ಲಂಬೋರ್ಡ್ನ 1000 ಜನರಿಗೆ ಮನೆಗಳನ್ನು ಕಟ್ಟಿಸಿಕೊಡಲಾಗಿದ್ದು, ಇನ್ನೂ 2300 ಜನರಿಗೆ ವಸತಿ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.
ವಿಜಯನಗರ ಜಿಲ್ಲೆಯಲ್ಲಿ ಮಳೆಯಿಂದಾಗಿ ಬೆಳೆಹಾನಿ ಆದ ರೈತರಿಗೆ ರೂ.1.65 ಕೋಟಿಗಳನ್ನು ಪರಿಹಾರವನ್ನು ನೀಡಲಾಗಿದ್ದು, ಕೋವಿಡ್-19 ಸಂದರ್ಭದಲ್ಲಿ ಮರಣ ಹೊಂದಿದ ವ್ಯಕ್ತಿಯ ಕುಟುಂಬದವರಿಗೆ 1.50 ಲಕ್ಷದಂತೆ ಒಟ್ಟು 18 ಕೋಟಿಗಳ ಪರಿಹಾರವನ್ನು ಜಿಲ್ಲೆಗೆ ಒದಗಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ನಮೂನೆ-53 ಮತ್ತು 57 ರ ಹಕ್ಕುಪತ್ರ ವಿತರ
ಣೆ ಮಾಡಿದರು.
ಕಂದಾಯ ಇಲಾಖೆಯಿಂದ ಆಶ್ರಯ ಯೋಜನೆಗೆ ಮಂಜೂರು ಆಗಿರುವ ಆದೇಶ ಪ್ರತಿಯನ್ನು ಆರ್.ಅಶೋಕ್ ಅವರು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಗಳಿಗೆ ಹಸ್ತಾಂತರ ಮಾಡಿದರು.
ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಕೂಡ್ಲಿಗಿಯಲ್ಲಿ ವಾಲ್ಮೀಕಿ ಭವನ ಉದ್ಘಾಟಣೆ ಮಾಡಿ ನಂತರ ಮಾತನಾಡಿದ ಅವರು ನಮ್ಮ ಸರ್ಕಾರವು ಕೂಡ್ಲಿಗಿ ಕೇತ್ರದಲ್ಲಿ ಆಡಳಿತದ ವಿಷಯದಲ್ಲಿ ಶೇ.100ರಷ್ಟು ಕೆಲಸ ಮಾಡಿದೆ ಎಂದು ಅವರು ತಿಳಿಸಿದರು.
ಹೈದರಾಬಾದ್ ಕರ್ನಾಟಕದ 7ಜಿಲ್ಲೆಗಳ ಅಭಿವೃದ್ಧಿಗೆ 3ಸಾವಿರ ಕೋಟಿ ರೂ. ಮೀಸಲಿಟ್ಟು, ಇದು ಅಭಿವೃದ್ಧಿ ಕಾರ್ಯಗಳಿಗೆ ಆಗದು ಎಂದು ಮುಖ್ಯಮಂತ್ರಿಯವರು ಮುಂದಿನ ವರ್ಷ 5 ಸಾವಿರ ಕೋಟಿ ಅನುದಾನ ನೀಡುವುದಾಗಿ ಹೇಳಿದ್ದಾರೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ಬಸವ, ಅಂಬೇಡ್ಕರ್ ಮತ್ತು ದೇವರಾಜ್ ಅರಸು ಯೋಜನೆಯಡಿಯಲ್ಲಿ ಅಲೆಮಾರಿ ಜನಾಂಗದವರಿಗೆ ಮನೆಗಳ ಕಾರ್ಯಾದೇಶ ಪತ್ರವನ್ನು ವಿತರಿಸಿದರು.
ಕೂಡ್ಲಿಗಿ ಕೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ಮಾತನಾಡಿ ನಬಾರ್ಡ್ನಿಂದ 500 ಕೋಟಿ ಹಾಗೂ ಸ್ಟೇಟ್ ಕ್ಯಾಪಿಟಲ್ನಿಂದ 280 ಕೋಟಿ ಅನುದಾನಲ್ಲಿ ಕೂಡ್ಲಿಗಿ ತಾಲೂಕಿನಲ್ಲಿ ಕುಡಿಯುವ ನೀರಿಗಾಗಿ ಈ ಭಾಗದ ಒಟ್ಟು 74 ಕೆರೆಗಳನ್ನು ತುಂಬಿಸಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಮಂಜೂರು ಮಾಡಿದ 2500 ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಈಗಾಗಲೇ ಶೇ.80ರಷ್ಟು ಕೆಲಸ ಪೂರ್ಣಗೊಂಡಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಕೂಡ್ಲಿಗಿ ತಾಲೂಕಿನಲ್ಲಿ ಶಿಕ್ಷಣಕ್ಕಾಗಿ 490 ಶಾಲೆಗಳ ನಿರ್ಮಾಣ ಮಾಡಲಾಗಿದ್ದು, ಬಿಸಿ ಊಟ, ರಸ್ತೆ ಸಂಪರ್ಕ ಸೇರಿದಂತೆ ವಿವಿಧ ಕಾರ್ಯಗಳನ್ನು ಮಾಡಲಾಗಿದೆ ಎಂದು ಅವರು ತಿಳಿಸಿದರು.
ಕೂಡ್ಲಿಗಿ ತಾಲೂಕಿನಲ್ಲಿ ನಿವೇಶನ ರಹಿತ ಬಡಜನರಿಗೆ 2500 ಆಶ್ರಯ ಮನೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿಯ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ 5 ಜನರಿಗೆ ಆದೇಶ ಪತ್ರವನ್ನು ವಿತರಿಸಿದರು.

ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್ ಸಿಂಗ್ ಅವರು 15 ಜನ ಫಲಾನುಭವಿಗಳಿಗೆ ವಿವಿಧ ಮಾಶಾಸನ ಆದೇಶ ಪತ್ರ ವಿತರಣೆ ಮಾಡಿ ನಂತರ ಮಾತನಾಡಿದರು.
ಈ ಸಂದರ್ಭದಲ್ಲಿ ಕೂಡ್ಲಿಗಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ಶಾರದಬಾಯಿ, ಮಾಜಿ ಲೋಕಸಭಾ ಸದಸ್ಯೆ ಜೆ.ಶಾಂತ, ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್, ಜಿ.ಪಂ ಸಿಇಒ ಹರ್ಷಲ್ ಬೋಯರ್ ನಾರಾಯಣರಾವ್, ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಸೇರಿದಂತೆ ಅನೇಕರು ಇದ್ದರು.

ವರದಿ, ವಿರೇಶ್, ಕೆ, ಎಸ್, ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
