ಹೂಡೇಂ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ…!!!

ಹೂಡೇಂ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ.

ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಬೆಳಿಗ್ಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪಿತಿ ಗಾಂಧಿಜೀ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹನೀಯರ ಭಾವಚಿತ್ರಗಳಿಗೆ ಪುಷ್ಪ ನಮನ ಪೂಜೆ ಸಲ್ಲಿಸಿದರು. ಇದೆ ವೇಳೆ ಶಿಕ್ಷಕರಾದ ಗೋವಿಂದಪ್ಪ ಮಾತನಾಡಿ ಮಹಾತ್ಮ ಗಾಂಧೀಜಿ ಜಾತೀಯತೆ ಹಾಗೂ ಅಸ್ಪಶ್ಯತೆ ನಿವಾರಣೆಗೆ ಶ್ರಮಿಸಿದರು. ಎಲ್ಲರೂ ಗಾಂಧೀಜಿಯವರ ತತ್ತ್ವ ಸಿದ್ಧಾಂತ ಆದರ್ಶಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಲಾಲ್‌ ಬಹುದ್ದೂರ್‌ ಶಾಸ್ತ್ರಿಯವರ ಜೈ ಜವಾನ್‌ ಜೈ ಕಿಸಾನ್‌ ಘೋಷಣೆ ಪ್ರಕಟಿಸುವ ಮೂಲಕ ದೇಶ ಸೇವೆ ದೇಶ ಸೇನೆ ಹಾಗೂ ಕೃಷಿ ಕ್ಷೇತ್ರದ ಮಹತ್ವ ಸಾರಿದರು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳಾದ ನರಸಿಂಹ ರೆಡ್ಡಿ ಅವರು ಮಾತನಾಡಿದರು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೈ ಜವಾನ್‌ ಜೈ ಕಿಸಾನ್‌ ಘೋಷಣೆ ಪ್ರಕಟಿಸುವ ಮೂಲಕ ದೇಶ ಸೇವೆ ದೇಶ ಸೇನೆ ಹಾಗೂ ಕೃಷಿ ಕ್ಷೇತ್ರದ ಮಹತ್ವ ಸಾರಿದರು ಹಾಗೂ ಅವರ ಜೀವನದ ಬಗ್ಗೆ ವಿಚಾರಗಳನ್ನು ಮಕ್ಕಳಿಗೆ ತಿಳಿಸಿದರು. ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಗೋವಿಂದಪ್ಪ ಮಚ್ಚೇಂದ್ರಪ್ಪ ಸುರೇಶ್, ಮಂಜುಳಾ, ಅನ್ನಪೂರ್ಣಮ್ಮ, ಸೇರಿದಂತೆ ಶಿಕ್ಷಕರು, ಅಡಿಗೆ ಸಿಬ್ಬಂದಿಗಳು, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಶಾಲಾ ವಿದ್ಯಾರ್ಥಿಗಳು ಇದ್ದರು.

ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend