ಭೀಕರ ಅಪಘಾತಕ್ಕೆ ಮೂವರು ಬಲಿ…!!!

ಭೀಕರ ಅಪಘಾತಕ್ಕೆ ಮೂವರು ಬಲಿ

ಹೊಳಲ್ಕೆರೆ
ಪಟ್ಟಣದ ಶಿವಮೊಗ್ಗ ರಸ್ತೆಯ ವಾಲ್ಮೀಕಿ ಭವನದ ಬಳಿ ನಡೆದ ಭೀಕರ ಅಪಘಾತದಲ್ಲಿ ಎರಡು ಬೈಕ್ಗಳಿಗೆ ಸರಕಾರಿ ಬಸ್ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ತಾಲೂಕಿನ ಮಾಳೇನಹಳ್ಳಿ ಗ್ರಾಮದ ಸತೀಶ್(೨೨), ಮನು(೨೨) ಹಾಗೂ ರಂಗಾಪುರ ಗ್ರಾಮದ ಚಂದ್ರು(೨೨) ಎಂದು ಗುರುತಿಸಲಾಗಿದೆ.
ಶಿವಮೊಗ್ಗ ಕಡೆಯಿಂದ ವೇಗವಾಗಿ ಬಂದ ಸರಕಾರಿ ಬಸ್ ಎರಡು ಬೈಕ್ನಲ್ಲಿ ಹೊಳಲ್ಕೆರೆ ಕಡೆಯಿಂದ ತಮ್ಮ ಊರುಗಳಿಗೆ ತೆರಳುತ್ತಿದ್ದವರಿಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಚಲ್ಲಾಪಿಲ್ಲಿಯಾಗಿ ಬಿದ್ದಿದ್ದ ಮೃತದೇಹಗಳನ್ನು ತಾಲೂಕು ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಈ ಬಗ್ಗೆ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಳೇನಹಳ್ಳಿ ಗ್ರಾಮಸ್ಥರು ಘಟನಾ ರಸ್ತೆಯಲ್ಲಿ ನಿರಂತರವಾಗಿ ಅಪಘಾತಗಳು ನಡೆಯುತ್ತಿದ್ದರು ಕೂಡ ಪೊಲೀಸ್ ಇಲಾಖೆಯವರು ಸ್ಥಳದಲ್ಲಿ ಎಚ್ಚರಿಕೆಯ ಬೋರ್ಡ್ಗಳನ್ನು ಹಾಕಿಲ್ಲ. ಲೋಕೋಪಯೋಗಿ ಇಲಾಖೆ ರಸ್ತೆಯ ಬದಿಯ ಬೇಲಿಯನ್ನು ಕಡಿಸಿಲ್ಲ. ಹೀಗಾಗಿಯೇ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿವೆ. ಈ ಕೂಡಲೇ ಸ್ಥಳದಲ್ಲಿ ಅಪಘಾತ ವಲಯ ಎಂದು ಬೋರ್ಡ್ಗಳನ್ನು ಹಾಕಬೇಕು ಎಂದು ಆಗ್ರಹಿಸಿದ್ದಾರೆ…

ವರದಿ. ಸುರೇಶ್, ಹೊಳಲ್ಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend