ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ರಜೆಯ ಮೇಲೆ ತೆರಳದಂತೆ ಡಿಸಿ ಅನಿರುದ್ಧ ಶ್ರವಣ್ ಆದೇಶ…!!!

ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ರಜೆಯ ಮೇಲೆ ತೆರಳದಂತೆ ಡಿಸಿ ಅನಿರುದ್ಧ ಶ್ರವಣ್ ಆದೇಶ
ಹೊಸಪೇಟೆ(ವಿಜಯನಗರ),: ವಿಜಯನಗರ ಜಿಲ್ಲೆಯಸಣ್ಣ ನೀರಾವರಿ ಇಲಾಖೆಯ ಎಲ್ಲಾ ಅಭಿಯಂತರರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಮತ್ತು ಉಪವಿಭಾಗಗಳ ಎಲ್ಲಾ ಅಭಿಯಂತರರು ಹಾಗೂ ಲೋಕೋಪಯೋಗಿ ಇಲಾಖೆಯ ಎಲ್ಲಾ ಅಭಿಯಂತರರು, ಕೇಂದ್ರಸ್ಥಾನದಲ್ಲಿಯೇ ಲಭ್ಯವಿದ್ದು, ಯಾರೂ ರಜೆಯ ಮೇಲೆ ತೆರಳದಂತೆ ವಿಜಯನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಅನಿರುದ್ಧ ಪಿ.ಶ್ರವಣ್ ಅವರು ಆದೇಶ ಹೊರಡಿಸಿದ್ದಾರೆ.
ವಿಜಯನಗರ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಪ್ರಕೃತಿ ವಿಕೋಪದ ತುರ್ತು ಸಂದರ್ಭಗಳಲ್ಲಿ ಕಾರ್ಯನಿರ್ವಹಿಸುವುದು ಅಗತ್ಯವಿರುವುದರಿಂದ ಈಗಾಗಲೇ ರಜೆಯನ್ನು ಪಡೆದುಕೊಂಡಲ್ಲಿ ಸದರಿ ರಜೆಯನ್ನು ರದ್ದುಪಡಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ವರದಿ. ಗಣೇಶ್. ಹೊಸಪೇಟೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend